ಸುಳ್ಯದ ದಸರಾಕ್ಕೆ ಅದ್ಧೂರಿ ತೆರೆ

0

 

ನಗರದಲ್ಲಿ ವೈಭವದ ಶೋಭಾಯಾತ್ರೆ

ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಕಳೆದ 9 ದಿನಗಳಿಂದ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆದ ಸುಳ್ಯ ದಸರಾ ಉತ್ಸವಕ್ಕೆ ಇಂದು ತೆರೆ ಬಿದ್ದಿದೆ.

 

ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಹೊರಟ ವೈಭವದ ಶೋಭಾಯಾತ್ರೆ ಸುಳ್ಯ ನಗರದಲ್ಲಿ ಸಂಚರಿಸಿ ರಾತ್ರಿ ಕಾಂತಮಂಗಲದ ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳ್ಳಲಿದೆ.

ಶೋಭಾಯಾತ್ರೆಯಲ್ಲಿ ವಿವಿಧ ಆಕರ್ಷಕ ಟ್ಯಾಬ್ಲೋಗಳು, ಹುಲಿವೇಷ, ಡಿಜೆ ಹತ್ತು ಹಲವು ವೈಶಿಷ್ಟ್ಯಗಳು ಭಕ್ತರ ಕಣ್ಮನ ಸೆಳೆಯುತ್ತಿದೆ.


ಸಾವಿರಾರು ಭಕ್ತರು ರಸ್ತೆಯ ಇಕ್ಕೆಲಗಳಲ್ಲಿ ವೈಭವದ ಶೋಭಾಯಾತ್ರೆಗೆ ಸಾಕ್ಷಿಗಳಾಗಿದ್ದಾರೆ.

LEAVE A REPLY

Please enter your comment!
Please enter your name here