ವಿದ್ಯಾಮಾತಾ ಅಕಾಡೆಮಿಯಲ್ಲಿ ಪಿಡಿಒ, ಗ್ರಾಮ ಪಂಚಾಯತ್ ಸೆಕ್ರೆಟರಿ, ಎನ್‌ಡಿಎ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭ

0

ಪುತ್ತೂರು : ಪುತ್ತೂರಿನ ಎಪಿಯಂಸಿ ರಸ್ತೆಯಲ್ಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯಲ್ಲಿ ಪಿಡಿಒ, ಗ್ರಾಮ ಪಂಚಾಯತ್ ಸೆಕ್ರೆಟರಿ, ಎನ್‌ಡಿಎ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಉದ್ಘಾಟನಾ ಸಮಾರಂಭ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಉಮೇಶ್ ನಾಯಕ್‌ರವರು ಉದ್ಘಾಟಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿ ಶುಭಹಾರೈಸಿದರು.


ಸನ್ಮಾನ : ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈರವರು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ನೆಲೆಯಲ್ಲಿ ಉಮೇಶ್ ನಾಯಕ್‌ರವರನ್ನು ಸನ್ಮಾನಿಸಿದರು.

ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಮಾತನಾಡಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಪಿಡಿಒ ಮತ್ತು ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಎನ್‌ಡಿಎ (National Defence Academy), ಸಿಡಿಎಸ್ (Combined Defence Service), ಕರಾವಳಿ ರಕ್ಷಣಾ ಪಡೆ, KPTCL ನೇಮಕಾತಿಗಳಿಗೆ ಸಂಬಂಧಿಸಿದಂತೆ ತರಬೇತಿಯು ಪ್ರಾರಂಭಿಸಲಾಗಿದೆ. ಈ ಮೇಲಿನ ಎಲ್ಲಾ ತರಬೇತಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಲಭ್ಯವಿರಲಿದೆ. ಆಸಕ್ತರು ವಿದ್ಯಾಮಾತಾ ಅಕಾಡೆಮಿಯ 8590773486 ಹಾಗೂ 9148935808ಗೆ ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು. ಇಲ್ಲವೇ ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಎಪಿಯಂಸಿ ರಸ್ತೆ ಪುತ್ತೂರು ದ.ಕ 574201 ಇಲ್ಲಿಗೆ ನೇರವಾಗಿ ಭೇಟಿ ಕೊಡಬಹುದು.

LEAVE A REPLY

Please enter your comment!
Please enter your name here