ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ನೂಜಿಬಾಳ್ತಿಲದ ಕಾಲೇಜು ವಿದ್ಯಾರ್ಥಿ ಸಾವು

0

ಕಡಬ:ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನೂಜಿಬಾಳ್ತಿಲದಿಂದ ವರದಿಯಾಗಿದೆ.
ನೂಜಿಬಾಳ್ತಿಲ ಗ್ರಾಮದ ನಿಡ್ಡೋ ಎಂಬಲ್ಲಿನ ಪದ್ಮನಾಭ ಗೌಡ ಎಂಬವರ ಪುತ್ರ ಧನುಷ್ ಮೃತಪಟ್ಟವರು.


ಬೆಥನಿ ಪದವಿ ಪೂರ್ವ ಕಾಲೇಜುನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಓದುತ್ತಿದ್ದ ಈತ ಕಳೆದ ಕೆಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ವಿದ್ಯಾರ್ಥಿಯು ತಂದೆ, ತಾಯಿ ಯಶೋದಾ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲಾ ಆಡಳಿತ ವರ್ಗ ಧನುಷ್ ನಿಧನಕ್ಕೆ ವಿಷಾದ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here