ಇಚ್ಲಂಪಾಡಿ: ಕರ್ತಡ್ಕದಲ್ಲಿ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

0

 

ನೆಲ್ಯಾಡಿ: ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿದೆ. ನಡೆಯಬೇಕಿರುವ ಕೆಲಸಗಳ ಬಗ್ಗೆಯೂ ಸದಾ ಗಮನ ಕೊಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವ ಸಂದರ್ಭದಲ್ಲಿ ಸ್ಥಳೀಯರು ನೀಡುವ ಸಹಕಾರ ಅಲ್ಲಿ ನಡೆಯುವ ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
ಅವರು ಮಾ.೩ರಂದು ಇಚ್ಲಂಪಾಡಿ ಗ್ರಾಮದ ಕೊರಮೇರು ಕರ್ತಡ್ಕ ಎಂಬಲ್ಲಿ ೧೮ ಲಕ್ಷ ರೂ.,ವೆಚ್ಚದಲ್ಲಿ ನಡೆಯಲಿರುವ ಸೇತುವೆ ಕಾಮಗಾರಿಗೆ ಗುದ್ದಲ್ಲಿ ಪೂಜೆ ನೆರವೇರಿಸಿ ಮಾತನಾಡಿದರು. ಜನರ ಬೇಡಿಕೆಗಳನ್ನು ಈಡೇರಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿದೆ. ರಸ್ತೆ, ಸೇತುವೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದ ವತಿಯಿಂದಲೂ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಎಸ್.ಅಂಗಾರ ಅವರು ಹೇಳಿದರು. ಪಿಡಬ್ಯ್ಲೂಡಿ ಇಂಜಿನಿಯರ್ ಪ್ರಮೋದ್ ಕುಮಾರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್.ಗೌಡ ಇಚ್ಲಂಪಾಡಿ, ಎಪಿಎಂಸಿ ಸದಸ್ಯ ಬಾಲಕೃಷ್ಣ ಬಾಣಜಾಲು, ಸೇರಿದಂತೆ ಗ್ರಾ.ಪಂ. ಸದಸ್ಯರು, ಸ್ಥಳೀಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here