ಆಲಂಕಾರು ವಲಯ ಒಕ್ಕಲಿಗ ಗೌಡ ಸಂಘದಿಂದ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ

0

ರಾಮಕುಂಜ: ಆಲಂಕಾರು ವಲಯ ಒಕ್ಕಲಿಗ ಗೌಡ ಸಂಘದ ವತಿಯಿಂದ ಆದಿಚುಂಚನಗಿರಿ ಮಠಕ್ಕೆ ಮಾ.1ರಂದು ಭೇಟಿ ನೀಡಲಾಯಿತು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಗುರು ಕಾಣಿಕೆ ಸಮರ್ಪಣೆ ಮಾಡಿ ಆಶೀರ್ವಾದ ಪಡೆಯಲಾಯಿತು. ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರ ಶುಭಾಶೀರ್ವಾದದೊಂದಿಗೆ ಆಲಂಕಾರು ವಲಯದ ಹಳೆನೇರೆಂಕಿ, ಕೊಯಿಲ, ಪೆರಾಬೆ, ಕುಂತೂರು ಮತ್ತು ರಾಮಕುಂಜ ಗ್ರಾಮದ 120 ಮಂದಿ ಸಮಾಜ ಬಾಂಧವರು ಹಾಗೂ ಗ್ರಾಮದ ಪದಾಧಿಕಾರಿಗಳು, ವಲಯದ ಪದಾಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here