ಪುತ್ತೂರು ವಿದ್ಯಾಸಂಸ್ಥೆಯ ವಸತಿ ನಿಲಯದಿಂದ ನಾಪತ್ತೆಯಾದ ವಿದ್ಯಾರ್ಥಿ ಪತ್ತೆ

0

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯ ವಸತಿ ನಿಲಯದಿಂದ ನಾಪತ್ತೆಯಾಗಿದ್ದ 19 ವರ್ಷ ಪ್ರಾಯದ ವಿದ್ಯಾರ್ಥಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿ ತನ್ನ ಪೋಷಕರ ಜೊತೆ ಪುತ್ತೂರು ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ಚಿತ್ರದುರ್ಗದ ಆದಿತ್ಯ ಜೆ(19ವ) ಅವರು ಸಂಸ್ಥೆಯ ವಸತಿ ನಿಲಯದಿಂದ ಫೆ. 22ರಂದು ಕಾಲೇಜಿಗೆಂದು ಹೋದವರು ನಾಪತ್ತೆಯಾಗಿದ್ದರು. ಈ ಕುರಿತು ವಸತಿ ನಿಲಯದ ಮೇಲ್ವಿಚಾರಕರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿದ್ಯಾರ್ಥಿ ಮಾನಸಿಕ ಒತ್ತಡದಿಂದ ಮುಂಬಾಯಿಗೆ ತೆರಳಿದ್ದರು ಎನ್ನಲಾಗಿದೆ. ಮುಂಬಾಯಿಂದ ವಿದ್ಯಾರ್ಥಿಯ ಪೊಷಕರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೋಷಕರು ಆತನನ್ನು ಕರೆದು ಕೊಂಡು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here