ಪೈಂಟ್ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬಿದ್ದು ಯುವಕ ಮೃತ್ಯು

0

ಪೈಂಟ್ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬಿದ್ದು ಬಿಹಾರ ಮೂಲದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ.

ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಹಿಂಬದಿಯ ಕಟ್ಟಡದಲ್ಲಿ ಬಿಹಾರ ಮೂಲದ ರಂಜಿತ್ (29) ಪೈಂಟ್ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಕೆಲಸ ಮುಗಿಸಿ ಮೇಲಿನಿಂದ ಇಳಿಯುತ್ತಿದ್ದಾಗ ಆಯ ತಪ್ಪಿ ಕೆಳಕ್ಕೆ ಬಿದ್ದರು.‌ ಗಂಭೀರ ಗಾಯಗೊಂಡಿದ್ದ ಆತನನ್ನು ಜತೆಗಾರರು ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅವರು‌ ಮೃತ ಪಟ್ಟರೆಂದು ತಿಳಿದು ಬಂದಿದೆ.

ಸುಳ್ಯದಲ್ಲಿ ಪೋಸ್ಟ್ ಮಾರ್ಟಂ ಆದ ಬಳಿಕ ಬಿಹಾರಕ್ಕೆ ಕೊಂಡೊಯ್ಯುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here