ಗಂಡಿಬಾಗಿಲು: ಮನೆಯಿಂದ ಕಳವು,6 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ

0

ಉಪ್ಪಿನಂಗಡಿ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 42 ಸಾವಿರ ನಗದು ದೋಚಿರುವ ಘಟನೆ ಮಾ. 3ರ ರಾತ್ರಿ ಸಂಭವಿಸಿದೆ. ಗಂಡಿಬಾಗಿಲು ಮಸೀದಿ ಬಳಿ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಕಪಾಟಿನಲ್ಲಿ ಇದ್ದ 14 ಪವನ್ ಚಿನ್ನಾಭರಣ ಮತ್ತು ನಗದು ದೋಚಿದ್ದಾರೆ.

ಮಾ. 3ರ ರಾತ್ರಿ ಆತೂರು ಮಸೀದಿಯಲ್ಲಿ ದಿಕ್ರ್ ಹಲ್ಕಾ ಕಾರ್ಯಕ್ರಮ ಇದ್ದುದರಿಂದ ಮನೆಯವರು ಸಂಜೆ 7 ಗಂಟೆಯ ಹೊತ್ತಿಗೆ ಮನೆಗೆ ಬೀಗ ಹಾಕಿ ಹೋಗಿದ್ದು, ಕಾರ್ಯಕ್ರಮ ಮುಗಿದ ಬಳಿಕ ರಾತ್ರಿ 11 ಗಂಟೆಯ ಹೊತ್ತಿಗೆ ಮರಳಿ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಾನಾ ಟಿ. ಕುಮಾರ್ , ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

LEAVE A REPLY

Please enter your comment!
Please enter your name here