ನ.6 : ಮುಕ್ಕೂರಿನಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

0

 

ಪೂರ್ವಭಾವಿ ಸಭೆ

ಬೆಳ್ಳಾರೆ ರೋಟರಿ ಕ್ಲಬ್ ಟೌನ್ ಮತ್ತು ಕಾನಾವು ಪ್ಯಾಮಿಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಸಹಭಾಗಿತ್ವದಲ್ಲಿ ಪ್ರಗತಿಪರ ಕೃಷಿಕರಾಗಿದ್ದ ದಿ.ತಿರುಮಲೇಶ್ವರ ಭಟ್ ಕಾನಾವು ಸ್ಮರಣಾರ್ಥ ನ.6 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರವು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ನರಸಿಂಹ ತೇಜಸ್ವಿ ಕಾನಾವು ಹೇಳಿದರು.

ಮುಕ್ಕೂರು ಶಾಲಾ ವಠಾರದಲ್ಲಿ ಅ.13 ರಂದು ಸಂಜೆ ವಿವಿಧ ಸಂಘ ಸಂಸ್ಥೆಗಳ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಇಸಿಜಿ, ಇಎನ್ ಟಿ, ರಕ್ತದೊತ್ತಡ, ಮಧುಮೇಹ ತಪಾಸಣೆ, ಕಣ್ಣಿನ ತಜ್ಞರು, ಸರ್ಜರಿ ಸೇರಿದಂತೆ ವಿವಿಧ ವಿಭಾಗದಲ್ಲಿ ಚಿಕಿತ್ಸೆ, ತಪಾಸಣೆ ನಡೆಯಲಿದೆ. ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ನುರಿತ ತಜ್ಞರು ಭಾಗವಹಿಸಲಿದ್ದಾರೆ ಎಂದು ವೈದ್ಯರಾದ ಡಾ.ರಾಮಕಿಶನ್ ಕಾನಾವು ಹೇಳಿದರು.

 

*ಕರಪತ್ರ, ಬ್ಯಾನರ್*
*ಮೂಲಕ ಪ್ರಚಾರ*
ಪೆರುವಾಜೆ, ಪಾಲ್ತಾಡಿ, ಬೆಳ್ಳಾರೆ, ಸವಣೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬ್ಯಾನರ್ ಅಳವಡಿಕೆ, ಕರಪತ್ರ ವಿತರಣೆ, ಸಾಮಾಜಿಕ ಜಾಲತಾಣ ಆಧಾರಿತವಾಗಿ ಪ್ರಚಾರ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ವೈದ್ಯಕೀಯ ಶಿಬಿರಕ್ಕೆ ಬೇಕಾದ ಸಿದ್ದತೆಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಬೆಳಗ್ಗೆಯಿಂದ ಮಧ್ಯಾಹ್ನ ತನಕ ಶಿಬಿರ ನಡೆಯಲಿದ್ದು 12 ಗಂಟೆಯೊಳಗೆ ನೋಂದಣಿಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಬೆಳ್ಳಾರೆ ರೋಟರಿ ಕ್ಲಬ್ ಟೌನ್ ಅಧ್ಯಕ್ಷ ಕೇಶವ ಮೂರ್ತಿ ಅವರು ಕಾರ್ಯಕ್ರಮದ ವ್ಯವಸ್ಥೆಯ ಜೋಡಣೆಯ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರಗತಿಪರ ಕೃಷಿಕರಾದ ವನಶ್ರೀ ಗಣಪಯ್ಯ, ಮೋಹನ್ ಬೈಪಡಿತ್ತಾಯ, ಸುಬ್ರಾಯ ಭಟ್ ನೀರ್ಕಜೆ, ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ನೇಸರ ಯುವಕ ಮಂಡಲದ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಬೆಳ್ಳಾರೆ ರೋಟರಿ ಕ್ಲಬ್ ಟೌನ್ ಇದರ ಶ್ಯಾಮ ಸುಂದರ ರೈ, ನವೀನ್ ರೈ ತಂಬಿನಮಕ್ಕಿ, ಎ.ಕೆ.ಮಣಿಯಾಣಿ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಮುಕ್ಕೂರು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಹಾಗೂ ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ ಮೊದಲಾದವರು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಬೆಳ್ಳಾರೆ ರೋಟರಿ ಕ್ಲಬ್ ಟೌನ್ ನ ಕೆ.ವಿನಯ ಕುಮಾರ್, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ನಾರಾಯಣ ಕೊಂಡೆಪ್ಪಾಡಿ, ಮುಕ್ಕೂರು-ಪೆರುವಾಜೆ ಜ್ಯೋತಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಸತ್ಯಪ್ರಸಾದ್ ಕಂಡಿಪ್ಪಾಡಿ, ಚೆನ್ನಾವರ ಅಭ್ಯುದಯ ಯುವಕ ಮಂಡಲದ ಪ್ರವೀಣ್ ಚೆನ್ನಾವರ, ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು, ಕಾರ್ಯದರ್ಶಿ ಶಶಿಕುಮಾರ್ ಬಿ.ಎನ್., ಮುಕ್ಕೂರು -ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಕಿರಣ್ ಚಾಮುಂಡಿಮೂಲೆ, ಸದಸ್ಯ ದಿವಾಕರ ಬೀರುಸಾಗು, ಮುಕ್ಕೂರು-ಪೆರುವಾಜೆ ಯುವಸೇನೆ ಅದ್ಯಕ್ಷ ಸಚಿನ್ ರೈ ಪೂವಾಜೆ, ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ, ರೋಟರಿ ಕ್ಲಬ್ ನ ಮೋನಪ್ಪ ಗೌಡ, ಶಶಿಧರ್ ಬಿ.ಕೆ., ಕುಶಾಲಪ್ಪ ಪಿ., ಶೀನ ಅನವುಗುಂಡಿ, ಗೋಪಾಲಕೃಷ್ಣ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here