ಅರಂತೋಡು : ಒಕ್ಕೂಟ ಪದಾಧಿಕಾರಿಗಳಿಗೆ ತರಬೇತಿ

0

 

 

ಸಂಪಾಜೆ ವಲಯದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 10 ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಅರಂತೋಡು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

 

ಅರಂತೋಡು ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಬನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪಾಜೆ ವಲಯ ಅಧ್ಯಕ್ಷ ಹೂವಯ್ಯ ಅಡ್ಯಡ್ಕ ಅಧ್ಯಕ್ಷತೆ ವಹಿಸಿದ್ದರು.

ದ ಕ ಜಿಲ್ಲಾ ಯೋಜನಾ ನಿರ್ದೇಶಕರಾದ ಪ್ರವೀಣ್ ಕುಮಾರ್ , ಸುಳ್ಯ ತಾಲೂಕು ಯೋಜನಾಧಿಕಾರಿ ನಾಗೇಶ್ , ಯೋಜನೆಯ ತಾಲೂಕು ಕೃಷಿ ಅಧಿಕಾರಿ ರಮೇಶ್ , ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಭಾರತಿ , ಆಂತರಿಕ ಲೆಕ್ಕ ಪರಿಶೋಧಕರಾದ ಉಮೇಶ್ ವಿವಿಧ ವಿಷಯಗಳ ಕುರಿತು ತರಬೇತಿ ನೀಡಿದರು.
ಸಂಪಾಜೆ ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ಸಭಾ ನಡವಳಿ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮ ನಿರ್ವಹಿಸಿದರು. ತೊಡಿಕಾನ ಸೇವಾಪ್ರತಿನಿಧಿ ಐತ್ತಪ್ಪ ಬಾಜಿನಡ್ಕ ವಂದಿಸಿದರು. ವಲಯದ ಎಲ್ಲಾ ಒಕ್ಕೂಟಗಳ ಪದಾಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here