ಎನ್ನೆಂಸಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

0

 

ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಸಮಾಜ ಕಾರ್ಯ ವಿಭಾಗ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಹಾಗೂ ಮನೋವೈದ್ಯಕೀಯ ವಿಭಾಗ ಕೆವಿಜಿ ಮೆಡಿಕಲ್ ಕಾಲೇಜ್ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಮಾನಸಿಕ ಆರೋಗ್ಯದ ಕುರಿತು ಕಿರು ನಾಟಕವನ್ನು ಪ್ರದರ್ಶನಗೊಂಡಿತು. ನಂತರ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿದ ಕೆ ವಿ ಜಿ ಮೆಡಿಕಲ್ ಕಾಲೇಜಿನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಪೂನಂ ಹಾಗೂ ಸಹಾಯಕ ಪ್ರಾಧ್ಯಾಪಕರು ಮನೋ ವೈದ್ಯಕೀಯ ವಿಭಾಗ ಕೆವಿಜಿ ಮೆಡಿಕಲ್ ಕಾಲೇಜಿನ ಡಾ. ಕೃತಿ ಶ್ರೀ ಇವರಿಂದ ಮಾನಸಿಕ
ರೋಗದ ವಿಧಗಳು ಹಾಗೂ ತಡೆಗಟ್ಟುವಿಕೆ ಯ ವಿಧಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಅರಿವು ಮೂಡಿಸಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪ್ರೊಫೆಸರ್ ಬಾಲಚಂದ್ರ ಗೌಡ ವಹಿಸಿರು ,ಮುಖ್ಯ ಅತಿಥಿಗಳಾಗಿ ರತ್ನಾವತಿ. ಡಿ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಖಾತ ಕಾತರಿ ಕೋಶ ಇದರ ಸಂಯೋಜಕಿ ಮಮತ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಕೃಪಾ ಎ .ಎನ್ ಸ್ವಾಗತಿಸಿ, ತೃತಿಯ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿನಿಯರಾದ ಕೃತಿ ಕೆ ಹೆಚ್ ಹಾಗೂ ಸೊನಾಲಿ ನಿರೂಪಿಸಿ, ಮನೋವೈದ್ಯಕೀಯ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿನಿಯಾದ ಡಾ. ಅರುಶಿ ವಂದಿಸಿದರು.

LEAVE A REPLY

Please enter your comment!
Please enter your name here