ಸೇಡಿಯಾಪು ಫ್ರೆಂಡ್ಸ್ ಕ್ಲಬ್ ವತಿಯಿಂದ ಮ್ಯಾಟ್ ಕಬಡ್ಡಿ ಪಂದ್ಯಾಟ, ಸೈನಿಕರಿಗೆ ಸನ್ಮಾನ, ಉಚಿತ ದಂತ ಚಿಕಿತ್ಸಾ ಶಿಬಿರ, ನೇತ್ರ ಜಾಗೃತಿ, ನೋಂದಾವಣಿ ಕಾರ್ಯಕ್ರಮ

0

ಪುತ್ತೂರು: ಕೋಡಿಂಬಾಡಿಯ ಸೇಡಿಯಾಪು ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದಲ್ಲಿ ಜಿಲ್ಲಾ ಮಟ್ಟದ 60 ಕೆ.ಜಿ. ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ, ಸೈನಿಕರಿಗೆ ಸನ್ಮಾನ, ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಸಮುದಾಯ ದಂತ ವಿಭಾಗ ಯೆನೆಪೋಯ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಆಶ್ರಯದಲ್ಲಿ ಉಚಿತ ವೈದ್ಯಕೀಯ ದಂತ ಶಿಬಿರ ಮತ್ತು ನೇತ್ರ ಜಾಗೃತಿ ಹಾಗೂ ನೇತ್ರದಾನ ನೋಂದಾವಣಿ ಕಾರ್ಯಕ್ರಮ ಮಾ.6ರಂದು ಸೇಡಿಯಾಪು ಕ್ರೀಡಾಂಗಣದಲ್ಲಿ ನಡೆಯಿತು.

 

                                          ಚಿತ್ರ: ವಿಷ್ಣು ಪುತ್ತೂರು

ಪಂದ್ಯಾಟ ಉದ್ಘಾಟಿಸಿದ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ವೈದ್ಯಕೀಯ ಶಿಬಿರ ಉದ್ಘಾಟಿಸಿದ ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ, ನೇತ್ರದಾನ ನೋಂದಾವಣೆ ಶಿಬಿರ‌ ಉದ್ಘಾಟಿಸಿದ ಖ್ಯಾತ ವೈದ್ಯ ಡಾ. ರಘು ಬೆಳ್ಳಿಪ್ಪಾಡಿ, ದಂತ ಚಿಕಿತ್ಸಾ ಶಿಬಿರ ಉದ್ಘಾಟಿಸಿದ ಭಾರತೀಯ ದಂತ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಮತ್ತು ನೇತ್ರದಾನಕ್ಕೆ ಹೆಸರು ನೋಂದಾಯಿಸಿದವರಿಗೆ ಪ್ರಮಾಣಪತ್ರ ವಿತರಿಸಿದ ಉದ್ಯಮಿ ಬಶೀರ್ ಹಾಜಿ ಅನಿಲಕೋಡಿರವರು ಮಾತನಾಡಿ ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಮೂಲಕ‌ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದರು.‌ ಮುಖ್ಯ ಅತಿಥಿಗಳಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎ. ಮುರಳೀಧರ ರೈ ಮಠಂತಬೆಟ್ಟು, ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆ, ನಮ್ಮೂರು ನೆಕ್ಕಿಲಾಡಿ ಸಂಸ್ಥೆಯ ಅಧ್ಯಕ್ಷ ಎ.ಜತೀಂದ್ರ ಶೆಟ್ಟಿ, ಸುದ್ದಿ ಬಿಡುಗಡೆಯ ಪ್ರಧಾನ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ ಮತ್ತು ಬೆಂಗಳೂರು ಆಡಿಟಿಂಗ್ ಕಂಪನಿಯ ಸೀನಿಯರ್ ಮ್ಯಾ

ನೇಜರ್ ಕರುಣಾಕರ ಸಾಮಾನಿ‌ ಭಾಗವಹಿಸಿದ್ದರು. ಡಾ. ಕೀರ್ತಿ ನೇತ್ರದಾನದ ಕುರಿತು ಮಾಹಿತಿ ನೀಡಿದರು. ಡಾ. ವಿನು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷರಾದ ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರದ್ವಿನ್ ಬದಿನಾರು ಪ್ರಾರ್ಥಿಸಿದರು. ಪುತ್ತೂರು ಲಿಟ್ಲ್ ಪ್ಲವರ್ ಶಾಲೆಯ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು. ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಕುಲಾಲ್, ಪ್ರಧಾನ ಕಾರ್ಯದರ್ಶಿ ಸತೀಶ್ ಮಡಿವಾಳ, ಜೊತೆ ಕಾರ್ಯದರ್ಶಿ ಪವನ್ ಕಲ್ಲಾಜೆ, ಕೋಶಾಧಿಕಾರಿ ಪ್ರಜ್ವಲ್ ಕುಮಾರ್, ವಿನೋದ್ ಕುಲಾಲ್, ಸುನಿತ್ ಕಾಪು, ಸಂತೋಷ್ ಸೇಡಿಯಾಪು, ಹರೀಶ್ ಸೇಡಿಯಾಪು, ತಿಲಕ್ ಮಡಿವಾಳ, ನಿತಿನ್ ಕಲ್ಲಾಜೆ ಮತ್ತು ಚಂದ್ರ ಬದಿನಾರು ಅತಿಥಿಗಳನ್ನು ಗೌರವಿಸಿದರು. ಉಧ್ಘಾಟನಾ ಸಮಾರಂಭದ ಬಳಿಕ ನಡೆದ ಉಚಿತ ವೈದ್ಯಕೀಯ ದಂತ ಶಿಬಿರ ಮತ್ತು ನೇತ್ರದಾನ ನೋಂದಾವಣೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಪುತ್ತೂರು ವಿವೇಕಾನಂದ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕರಾದ ಬಾಲಚಂದ್ರ ಗೌಡ ಬಾರ್ತಿಕುಮೇರು ಮತ್ತು ಯತೀಶ್ ಕುಮಾರ್ ಬಾರ್ತಿಕುಮೇರು ನೇತೃತ್ವದ ದೈಹಿಕ ಶಿಕ್ಷಣ ಶಿಕ್ಷಕರ ತಂಡ ಕಬಡ್ಡಿ ಪಂದ್ಯಾಟದ ವ್ಯವಸ್ಥೆಯನ್ನು ನಿರ್ವಹಿಸಿದೆ.
ಸಂಜೆ ಸಭಾ ಕಾರ್ಯಕ್ರಮ ಮತ್ತು ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಪಂದ್ಯಾಟದ ಬಳಿಕ ಬಹುಮಾನ ವಿತರಣಾ ಸಮಾರಂಭ ಜರಗಲಿದೆ. ಕಬಡ್ಡಿ ಪಂದ್ಯಾಟದ ನೇರಪ್ರಸಾರ ಸುದ್ದಿ ಪುತ್ತೂರು ನ್ಯೂಸ್ ಯೂ ಟ್ಯೂಬ್ ಚಾನೆಲ್ ಮತ್ತು ಸುದ್ದಿ ಫೇಸ್ಬುಕ್ ಪೇಜಿನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here