ವಿಟ್ಲದಲ್ಲಿ‌ ಸರಣಿ ಅಪಘಾತ – ದ್ವಿಚಕ್ರ ಸವಾರನಿಗೆ ಗಾಯ

0

ವಿಟ್ಲ: ಹಿಂದಿನಿಂದ ಬಂದ ಟ್ರ್ಯಾಕ್ಟರ್ ಒಂದು ಆಕ್ಟಿವಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಕ್ಟಿವಾ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದು, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ನಾಲ್ಕುಮಾರ್ಗದಲ್ಲಿ ನಡೆದಿದೆ.

ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

LEAVE A REPLY

Please enter your comment!
Please enter your name here