ಕೌಕ್ರಾಡಿ ಗ್ರಾ.ಪಂ.ನಲ್ಲಿ ವಿಶ್ವ ಮಹಿಳಾ ದಿನಾಚರಣೆ

0

ನೆಲ್ಯಾಡಿ: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್‌ನಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಹಾಗೂ ನರೇಗಾ ಮಹಿಳಾ ಫಲಾನುಭವಿಗಳಿಗೆ ಲಿಂಬೆ ಚಮಚ ಓಟ, ಸೂಜಿಗೆ ದಾರ ಹಾಕುವುದು, ನೆಲದಿಂದ ಹೆಸರು ಕಾಳು ಹೆಕ್ಕುವುದು, ಸಂಗೀತ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸಾಧಕ ಮಹಿಳೆಯನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ, ಉಪಾಧ್ಯಕ್ಷೆ ಭವಾನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್, ಎನ್‌ಆರ್‌ಎಲ್ ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ನರೇಗಾ ಫಲಾನುಭವಿಗಳು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here