ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಸುಧಾಕರ ಆಲೆಟ್ಟಿ ಯವರು ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ. ಚುನಾವಣಾಧಿಕಾರಿ ಆಯ್ಕೆ ಪ್ರಕ್ರಿಯೆ ನಡೆಸಿದರು.
ಸಂಘದ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು. ಡಿ.ಸಿ.ಸಿ ಬ್ಯಾಂಕ್ ವಲಯ ಮೇಲ್ವಿಚಾರಕ ಬಾಲಕೃಷ್ಣ ಪುತ್ಯ , ಸಿ.ಇ.ಒ. ದಿನಕರ ಆಲೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.