ಹಣ್ಣಿನ ಅಂಗಡಿಗೆ ಬೆಂಕಿ ಪ್ರಕರಣ ಆರೋಪಿಯ ಸ್ಥಳ ಮಹಜರು

0

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಪೆದಮಲೆ ಎಂಬಲ್ಲಿ ಹಣ್ಣಿನ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಽಸಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿರುವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಕರೆದುಕೊಂಡು ಹೋಗಿ ಮಹಜರು ಪ್ರಕ್ರಿಯೆ ನಡೆಸಿದರು. ಕಳೆದ ವರ್ಷ ಉಪ್ಪಿನಂಗಡಿ ಸಮೀಪದ ಪೆದಮಲೆ ಎಂಬಲ್ಲಿ ರಸ್ತೆ ಬದಿಯ ಹಣ್ಣಿನ ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಇಳಂತಿಲ ಜಯರಾಮ ಎಂಬಾತನನ್ನು ಬಂಽಸಲಾಗಿತ್ತು. ಆತ ನೀಡಿದ ಮಾಹಿತಿಯಾಧಾರದಲ್ಲಿ ಇನ್ನೋರ್ವ ಆರೋಪಿ ಪೆರಿಯಡ್ಕ ನಿವಾಸಿ ಧನಂಜಯ ಯಾನೆ ಸುಜೀತ್ ಎಂಬಾತನ ಬಂಧನಕ್ಕೆ ಬಲೆ ಬೀಸಿದ್ದು, ಆದರೆ ಅಷ್ಟರಲ್ಲಾಗಲೇ ಆತ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ. ಬಳಿಕ ಪೊಲೀಸರು ಈತನನ್ನು ಸ್ಥಳ ಮಹಜರು ಪ್ರಕ್ರಿಯೆಗೆ ಒಳಪಡಿಸಿದರು.

LEAVE A REPLY

Please enter your comment!
Please enter your name here