ಸುಳ್ಯ : ಸಾಂದೀಪ್ ವಿಶೇಷ ಶಾಲೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

0

 

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ತಾಲೂಕು ಆಡಳಿತ, ವಕೀಲರ ಸಂಘ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ, ಸಾಂದೀಪ್ ವಿಶೇಷ ಶಾಲೆ, ಸುದ್ದಿ ಸಮೂಹ ಮಾಧ್ಯಮ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಸಾಂದೀಪ್ ಶಾಲಾ ಸಭಾಂಗಣದಲ್ಲಿ ಇಂದು ನಡೆಯಿತು.

 

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಕಿರಿಯ ನ್ಯಾಯಾಲಯದ ನ್ಯಾಯಾಧೀಶೆ, ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ ಕು.ಅರ್ಪಿತಾ ದೀಪ ಬೆಳಗಿಸಿ ಚಾಲನೆ ನೀಡಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ವ್ಯಕ್ತಿಗೂ ಉತ್ತಮ ಬದುಕು ನಿರ್ವಹಿಸುವಲ್ಲಿ ಉತ್ತಮ ಮಾನಸಿಕ ಆರೋಗ್ಯ ಅತಿ ಮುಖ್ಯವಾಗಿರುತ್ತದೆ. ಶರೀರವನ್ನು ಸದೃಢ ಆರೋಗ್ಯವಂತ ಸ್ಥಿತಿಯಲ್ಲಿ ಕಾಪಾಡಿಕೊಳ್ಳುವಂತೆ ಮಾನಸಿಕ ಆರೋಗ್ಯವೂ ಕೂಡ ಅತಿ ಅಮೂಲ್ಯವಾಗಿದೆ. ಆದ್ದರಿಂದ ಆರೋಗ್ಯದ ಕಡೆ ಪ್ರತಿಯೊಬ್ಬರು ಗಮನಹರಿಸಿಕೊಂಡು ಸಮಾಜದಲ್ಲಿ ಮಾದರಿ ಜೀವನವನ್ನು ನಿರೂಪಿಸಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್ ಬಿ ಫೌಂಡೇಶನ್ ಅಧ್ಯಕ್ಷ ಎಂಬಿ ಸದಾಶಿವ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಳ್ಯ ತಹಶೀಲ್ದಾರ್ ಕು. ಅನಿತಾ ಲಕ್ಷ್ಮಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಸುಳ್ಯ ನ್ಯಾಯಾಲಯದ ಎ ಪಿ ಪಿ ಅರೋಣ್ ಡಿ ಸೋಜ, ಮಹಿಳಾ ಮತ್ತು ಶಿಶು ಯೋಜನಾಧಿಕಾರಿ ಶ್ರೀಮತಿ ರಶ್ಮಿ, ಸುಳ್ಯ ವಕೀಲರ ಸಂಘದ ಅಧ್ಯಕ್ಷ ಕೆ ನಾರಾಯಣ, ಕೋಶಾಧಿಕಾರಿ ಜಗದೀಶ್ ಡಿ ಪಿ , ವಕೀಲೆ ಕು.ಲೋಲಾಕ್ಷಿ, ಮೊದಲಾದವರುರು ಉಪಸ್ಥಿತರಿದ್ದರು.
ಕೆವಿಜಿ ಮನುಶಾಸ್ತ್ರಜ್ಞ ವಿಭಾಗದ ಮುಖ್ಯಸ್ಥೆ ಡಾ. ಪೂನಮ್ ರವರು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಶಾಂದೀಪ್ ವಿಶೇಷ ಶಾಲೆಯ ಪ್ರಾಂಶುಪಾಲೆ ಹರಿಣಿ ಸದಾಶಿವ ಸ್ವಾಗತಿಸಿ, ಪತ್ರಕರ್ತ ಶರೀಫ್ ಸುದ್ದಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಕೀಲರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಶಾಂದೀಪ್ ಶಾಲೆಯ ವಿದ್ಯಾರ್ಥಿಗಳು ಪೋಷಕರು, ನ್ಯಾಯಾಲಯದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯ ಅತಿಥಿಗಳನ್ನು ಸಾಂದೀಪ್ ಶಾಲೆ ವತಿಯಿಂದ ಶಾಲುಹೊದಿಸಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಸುಳ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಾಂದೀಪ್ ವಿಶೇಷ ಶಾಲೆಯ ತರಗತಿ ಕೊಠಡಿಗಳು ಮತ್ತು ವಿದ್ಯಾರ್ಥಿಗಳಿಗೆ ನಿರ್ಮಿಸಿರುವ ಇತರ ಸೌಕರ್ಯಗಳನ್ನು ನ್ಯಾಯಾಧೀಶ ಕು. ಅರ್ಪಿತಾ, ಹಾಗೂ ಸುಳ್ಯ ನ್ಯಾಯಾಲಯಕ್ಕೆ ನೂತನವಾಗಿ ಆಗಮಿಸಿರುವ ಎಪಿಪಿ ಅರೋಣ್ ಡಿ ಸೋಜ ವೀಕ್ಷಿಸಿದರು.

 

LEAVE A REPLY

Please enter your comment!
Please enter your name here