ಮಾ. 19ರಂದು ಪುತ್ತೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ, ಕಾರ್ಯಕರ್ತರ ಸಭೆ

0

ಪುತ್ತೂರು: ಮಾಜಿ ಮುಖ್ಯಮಂತ್ರಿ , ವಿಧಾನಸಭಾಟ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾ. 19 ರಂದು ಪುತ್ತೂರಿಗೆ ಭೇಟಿ ನೀಡಲಿದ್ದು ಅದೇ ದಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಲಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಕಾರ್ಯಕರ್ತರಲ್ಲಿ ವಿನಂತಿಸಿದ್ದಾರೆ.

 

ಮಾ.9ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಡೆಸಿಕೊಂಡು ಬರುತ್ತಿದ್ದು ಪಕ್ಷದ ಕಡೆ ಹೆಚ್ಚು ಜನರು ಒಲವು ವ್ಯಕ್ತಪಡಿಸಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬೆಂಬಲ ನೀಡುತ್ತಿರುವುದು ಮಾತ್ರವಲ್ಲದೆ ಜಿಲ್ಲೆಯಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ನಡೆಯುತ್ತಿದೆ. ಬೂತ್ ಮಟ್ಟದಲ್ಲಿ , ವಲಯ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಿರಂತರವಾಗಿ ನಡೆಯುತ್ತಿದ್ದು ಮಾ. 19 ರಂದು ಸಿದ್ದರಾಮಯ್ಯ ಅವರು ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ ಎಂದು ಹೇಳಿದರು. ಸದಸ್ಯತ್ವ ಅಭಿಯಾನದಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ಅಭಿಯಾನದ ಯಶಸ್ವಿಗೆ ಕಾರಣಕರ್ತರಾಗಬೇಕು ಎಂದು ತಿಳಿಸಿದರು.

ಮಂಗಳೂರಿನ ಮಾಜಿ ಮೇಯರ್,ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸದಸ್ಯ ಅಭಿಯಾನದ ಉಸ್ತುವಾರಿಯಾಗಿರುವ ಮಹಾಬಲ ಮಾರ್ಲ ಮಾತನಾಡಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಾವಣೆ ಕಾರ್ಯದಲ್ಲಿ ಇವತ್ತಿನ ಅಂಕಿ ಅಂಶದ ಪ್ರಕಾರ ಜಿಲ್ಲೆಯಲ್ಲಿ ಪುತ್ತೂರು ಬ್ಲಾಕ್ ಪ್ರಥಮ ಸ್ಥಾನದಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಮಾತನಾಡಿ ಮಾರ್ಚ್ ೧೩ ರಂದು ಆದಿತ್ಯವಾರ ಒಂದು ದಿನ ಬೂತ್ ಮಟ್ಟದಲ್ಲಿ ಎಲ್ಲಾ ಕಾರ್ಯಕರ್ತರು ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಹಾಕಿ ಕೊಳ್ಳಲು ಕಾರ್ಯ ಯೋಜನೆ ಹಾಕಿ ಕೊಳ್ಳಲಾಗಿದೆ ಅಂದು ಬ್ಲಾಕ್ ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕದ ಪದಾಧಿಕಾರಿಗಳು ಬೂತ್ ಅಧ್ಯಕ್ಷರುಗಳು ತಮ್ಮ ತಮ್ಮ ಬೂತ್ ನಲ್ಲಿ ಆ ದಿನ ಸದಸ್ಯತ್ವ ಅಭಿಯಾನದಲ್ಲಿ ಬಾಗವಹಿಸಲಿದ್ದಾರೆ ಎಂದು ಹೇಳಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ಯವರು ಮಾತನಾಡಿ ಈಗ ಪುತ್ತೂರು ಬ್ಲಾಕ್ ಪ್ರಥಮ ಸ್ಥಾನದಲ್ಲಿದೆ, ಬ್ಲಾಕ್ ಅಧ್ಯಕ್ಷರು 15,000 ಟಾರ್ಗೆಟ್ ಕೊಟ್ಟಿದ್ದಾರೆ ಅದನ್ನು ರೀಚ್ ಮಾಡಲು ನಾವೆಲ್ಲಾ ಇಂದೇ ಸಂಪೂರ್ಣವಾಗಿ ಸದಸ್ಯತ್ವ ನೋಂದಾವನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.

ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶುಕೂರ್ ಹಾಜಿ, ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರ್, ಸೀತಾ ಭಟ್, ಮಾಜಿ ನಗರ ಸಭಾ ಅಧ್ಯಕ್ಷೆ ಜಯಂತಿ ಬಲ್ನಾಡ್, ವಿಜಯಲಕ್ಷ್ಮಿ ಕೆ, ಮೈಮೂನತ್ ಮೆಹರಾ, ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಹಿಂದುಳಿದ ವರ್ಗದ ಅಧ್ಯಕ್ಷ ಹರೀಶ್ ಕೋಟ್ಯಾನ್, ಬ್ಲಾಕ್ ನ ಪದಾಧಿಕಾರಿಗಳು ಹಾಗೂ ವಲಯದ ಅಧ್ಯಕ್ಷರು ಗಳು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಅಮಲ ರಾಮ ಚಂದ್ರ ಸ್ವಾಗತಿಸಿದರು ಪೂರ್ಣೇಶ್ ಭಂಡಾರಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಂದಿಸಿದರು .

LEAVE A REPLY

Please enter your comment!
Please enter your name here