ಜೇಸಿಐ ಪಂಜ ಪಂಚಶ್ರೀ- ಬೆಳ್ಳಿ ‌ಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ

0

 

 

ಜೇಸಿಐ ಪಂಜ ಪಂಚಶ್ರೀ ಇದರ ಬೆಳ್ಳಿಹಬ್ಬದ ಆಚರಣೆಯು ನ.7 ರಿಂದ ನ.12 ತನಕ ವಿಜೃಂಭಣೆಯಿಂದ ಜರುಗಲಿದೆ.ಇದರ ಆಮಂತ್ರಣ ಪತ್ರಿಕೆ “ರಜತ ರಶ್ಮಿ “ಬಿಡುಗಡೆ ಕಾರ್ಯಕ್ರಮ ಅ.19 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಪಾರ್ವತಿ ಸಭಾಭವನದಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ಶಿವಪ್ರಸಾದ್ ಹಾಲೆಮಜಲು ಸಭಾಧ್ಯಕ್ಷತೆ ವಹಿಸಿದ್ದರು. ಬೆಳ್ಳಿ ‌ಹಬ್ಬ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಜಾಕೆ, ಕಾರ್ಯದರ್ಶಿ ತೀರ್ಥಾನಂದ ಕೊಡೆಂಕಿರಿ, ಕೋಶಾಧಿಕಾರಿ ಸೋಮಶೇಖರ ನೇರಳ,ಘಟಕದ ನಿಕಟ ಪೂರ್ವಾಧ್ಯಕ್ಷ ಗಣೇಶ್ ಪ್ರಸಾದ್ ಭೀಮಗುಳಿ, ಕಾರ್ಯಕ್ರಮ ನಿರ್ದೇಶಕ ಲೋಕೇಶ್ ಆಕ್ರಿಕಟ್ಟೆ, ಕಾರ್ಯದರ್ಶಿ ಕೌಶಿಕ್ ಕುಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.ರಜತ ರಶ್ಮಿ ಸಂಯೋಜನ ಸಮಿತಿಯವರು, ಕಾರ್ಯಕ್ರಮ ಸಂಯೋಜಕರು, ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಶಿವಪ್ರಸಾದ್ ಹಾಲೆಮಜಲು ಸ್ವಾಗತಿಸಿದರು.ಕೌಶಿಕ್ ಕುಳ ವಂದಿಸಿದರು.

LEAVE A REPLY

Please enter your comment!
Please enter your name here