ಸಂಪಾಜೆ ಸಹಕಾರಿ ಸಂಘದ ಶತಮಾನೋತ್ಸವ-ಕಾರ್ಯಾಲಯ ಉದ್ಘಾಟನೆ

0

 

ಶತಮಾನೋತ್ಸವದ ಸಂಭ್ರಮದಲ್ಲಿರುವ ಸುಳ್ಯ ತಾಲೂಕಿನ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶತಮಾನೋತ್ಸವದ ಕಾರ್ಯಾಲಯವನ್ನು ಇತ್ತೀಚೆಗೆ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ರವರು ಉದ್ಘಾಟಿಸಿದರು.

 

ಮುಂದಿನ ಜನವರಿಯಲ್ಲಿ ನಡೆಯುವ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಈಗಾಗಲೇ ವಿವಿಧ ಸಮಿತಿಗಳು ರಚನೆಯಾಗಿದ್ದು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಸಂಘದಲ್ಲಿ ಶತಮಾನೋತ್ಸವ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು.

 

ಗ್ರಾಮ ಪಂಚಾಯಿತ್ ಅಧ್ಯಕ್ಷರು ಹಾಗೂ ಪ್ರಚಾರ ಸಮಿತಿಯ ಸಂಚಾಲಕರಾದ ಜಿ ಕೆ ಹಮೀದ್, ಸಂಘದ ಉಪಾಧ್ಯಕ್ಷರಾದ ಮಹಮದ್ ಕುಂಞಿ ಗೂನಡ್ಕ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ಶತಮಾನೋತ್ಸವ ವಿವಿಧ ಸಮಿತಿಯ ಸಂಚಾಲಕರು, ಸಹ ಸಂಚಾಲಕರು ಹಾಗೂ ಸದಸ್ಯರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here