ಕೆದಂಬಾಡಿ ಗ್ರಾಪಂ: ಮಹಿಳಾ ದಿನಾಚರಣೆ ,ವಿವಿಧ ಆಟೋಟ ಸ್ಪರ್ಧೆ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಮಹಿಳಾ ಸಾಂತ್ವನ ಕೇಂದ್ರ ಪುತ್ತೂರು, ಸುಗ್ರಾಮ ಸಂಘ ಮತ್ತು ಆಸರೆ ಸಂಜೀವಿನಿ ಒಕ್ಕೂಟ ಇವುಗಳ ಸಹಭಾಗಿತ್ವದಲ್ಲಿ ಮಹಿಳಾ ದಿನಾಚರಣೆ, ವಿವಿಧ ಆಟೋ ಸ್ಪರ್ಧೆ ಕೆದಂಬಾಡಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು.

 

 


ಗ್ರಾಮ ಪಂಚಾಯತ್ ಅಧ್ಯಕ್ಷ ರತನ್ ರೈ ಕುಂಬ್ರ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡಿರುವುದು ಮಾತ್ರವಲ್ಲದೆ ಜೀವನದಲ್ಲಿ ಎಲ್ಲ ರೀತಿಯ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು. ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ರವರು ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಲ್ಲಿ ಗಂಡು-ಹೆಣ್ಣಿಗೆ ಸಮಾನ ವೇತನ ನೀಡಲಾಗುತ್ತಿದೆ ಮಹಿಳೆಯರು ಯೋಜನೆಯ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಿದರು. ಮಹಿಳಾ ಸಾಂತ್ವನ ಕೇಂದ್ರ ಪುತ್ತೂರು ಇದರ ಆಪ್ತ ಸಮಾಲೋಚಕಿ ನಿಶಾ ಪ್ರಿಯ ಮಹಿಳಾ ದೌರ್ಜನ್ಯ ತಡೆ ಕಾಯ್ದೆ ಸಾಂತ್ವನ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುಜಾತ ,ರೇವತಿ, ಜಯಲಕ್ಷ್ಮಿ, ಅಸ್ಮಾ, ಸುಜಾತ ಎನ್, ಅಂಗನವಾಡಿ ಕಾರ್ಯಕರ್ತೆ ಯವರಾದ ತಾರ ಬಲ್ಲಾಳ್, ಕಮಲಾಕ್ಷಿ , ಆಸರೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಚಂದ್ರಾವತಿ, ಕಾರ್ಯದರ್ಶಿ ವಿಶಾಲಾಕ್ಷಿ ಉಪಸ್ಥಿತರಿದ್ದರು. ಜನ ಶಿಕ್ಷಣ ಟ್ರಸ್ಟ್‌ನ ಸಂಯೋಜಕಿ ಕಾವೇರಿ ಕಾರ್ಯಕ್ರಮ ನಿರೂಪಿಸಿದರು. ಸಾಂತ್ವನ ಕೇಂದ್ರದ ಸಮಾಜ ಕಾರ್ಯಕರ್ತೆ ಅಶ್ವಿನಿ, ಸಂಜೀವಿನಿ ಒಕ್ಕೂಟ ಮತ್ತು ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

LEAVE A REPLY

Please enter your comment!
Please enter your name here