ಏನೆಕಲ್ಲು ಪ್ರಾ.ಕೃ.ಪ.ಸ.ಸಂಘದಲ್ಲಿ ಮಾಹಿತಿ ಕಾರ್ಯಾಗಾರ

0

 

 

ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಏನೆಕಲ್ಲು ಮತ್ತು ತೋಟಗಾರಿಕಾ ಇಲಾಖೆ ಸುಳ್ಯ ಇದರ ಸಹಯೋಗದಲ್ಲಿ ಅಡಿಕೆ ಬೆಳೆಯನ್ನು ಬಾಧಿಸಿರುವ ಎಲೆಚುಕ್ಕಿ ರೋಗ ಮತ್ತು ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ನಿಯಂತ್ರಣ ಇದರ ಬಗ್ಗೆ ಮಾಹಿತಿ ಕಾರ್ಯಾಗಾರವು ಸಂಘದ ಸಭಾಭವನದಲ್ಲಿ ನಡೆಯಿತು.


ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕಾ ಇಲಾಖೆ ಸುಳ್ಯ ಇದರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀಮತಿ ಸುಹಾನ ಪಿ. ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಸಹಾಯಕ ತೋಟಗಾರಿಕಾ ಅಧಿಕಾರಿ ಅರಬಣ್ಣ ಪೂಜಾರಿ ಮತ್ತು ಪಂಜ ರೈತ ಉತ್ಪಾದಕ ಕಂಪೆನಿ ಇದರ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ಇವರು ರೋಗ ಮತ್ತು ರೋಗ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕಲ್ಕುದಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭರತ್ ನೆಕ್ರಾಜೆ ಸ್ವಾಗತಿಸಿ, ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖರ್ ಕೇದಿಗೆಬನ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 100 ಕ್ಕೂ ಹೆಚ್ಚು ಜನ ರೈತ ಸದಸ್ಯರು ಸಭೆಯಲ್ಲಿ ಇದ್ದರು.

LEAVE A REPLY

Please enter your comment!
Please enter your name here