ವಿಟ್ಲ: ಟೈಮಿಂಗ್ಸ್ ವಿಚಾರಕ್ಕೆ ಸಂಬಂದಿಸಿ ಓವರ್ ಟೇಕ್ ಮಾಡುವ ಭರದಲ್ಲಿ ಎರಡು ಖಾಸಗಿ ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿ ಸಮೀಪದ ಮೈತ್ರೇಯಿ ಗುರುಕುಲದ ಮುಂಭಾಗದಲ್ಲಿ ಮಾ.11ರಂದು ನಡೆದಿದೆ.
ವಿಟ್ಲ ಭಾಗದಿಂದ ಸಾಲೆತ್ತೂರು ಮಾರ್ಗವಾಗಿ ಮಂಗಳೂರಿಗೆ ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್ ಗಳು ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಟೈಮಿಂಗ್ಸ್ ವಿಚಾರವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಘಟನಾ ಸ್ಥಳಕ್ಕೆ ತೆರಳಿರುವ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿ ಎರಡೂ ಬಸ್ಸುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ