ಸುಳ್ಯ ದಸರಾ ಉತ್ಸವದಲ್ಲಿ ಭಾಗವಹಿಸಿದ ಟ್ಯಾಬ್ಲೋ ಸಮಿತಿಗಳಿಗೆ ಅಭಿನಂದನೆ

0

 

 

ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ , ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ನಡೆದ 51 ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲಾ ಟ್ಯಾಬ್ಲೋ ಸಮಿತಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸುವ ಕಾರ್ಯಕ್ರಮ ಅ. 21ರಂದು ನಡೆಯಿತು.

 

ಶಾರದಾಂಭಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾರಾಯಣ ಕೇಕಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್,ಅಧ್ಯಕ್ಷ ಚಿದಾನಂದ ವಿದ್ಯಾನಗರ, ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ನಾರಾಯಣ ಕೇಕಡ್ಕ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪ್ರದೀಪ್ ಕೆ.ಎನ್. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ, ಗುಲ್ಬರ್ಗಾ ಗೌರವ ಸಲಹೆಗಾರ ಹರೀಶ್ ಉಬರಡ್ಕ, ಕೆ.ಎನ್. ಸತೀಶ್ ಹಾಗು ಮೂರು ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಿದಾನಂದ ವಿದ್ಯಾನಗರ ಸ್ವಾಗತಿಸಿ, ರವಿಚಂದ್ರ ಕೊಡಿಯಾಲಬೈಲು ವಂದಿಸಿದರು.

LEAVE A REPLY

Please enter your comment!
Please enter your name here