ರಾಮಕುಂಜ ಆ.ಮಾ.ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರ

0

ರಾಮಕುಂಜ: ವೃತ್ತಿಪರ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ಮಾ.11ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ೫ ರಿಂದ 9ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಸುಳ್ಯ ಸರಕಾರಿ ಪ.ಪೂ.ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರವರು ಮಾತನಾಡಿ, ವಿದ್ಯಾರ್ಥಿಗಳಿಗೆ ಅಂಕದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಕೌಶಲ್ಯಗಳು ಬೇಕಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕಾದಲ್ಲಿ ಸಾಕಷ್ಟು ಪೂರ್ವಸಿದ್ಧತೆ, ತರಬೇತಿಯ ಅವಶ್ಯಕತೆ ಇದೆ. ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ತರಬೇತಿಯ ಅವಶ್ಯಕತೆಯೂ ಇದೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿದಲ್ಲಿ ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅವರು ಯಶಸ್ಸು ಗಳಿಸಬಹುದು. ಈ ನಿಟ್ಟಿನಲ್ಲಿ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ ಮುಂದೆ ಬಂದಿರುವುದು ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಪೋಷಕರು ಈ ಬಗ್ಗೆ ಹೆಚ್ಚಿನ ಗಮನಹರಿಸಿ ತಮ್ಮ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸುವಂತೆ ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಸಭೆಯ ಅಧ್ಯಕ್ಷತೆ ವಹಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್.ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಕಿಶೋರ್ ಕುಮಾರ್ ಬಿ.,ಯವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಅಕ್ಷತಾ ಸ್ವಾಗತಿಸಿ, ಪ್ರೌಢಶಾಲಾ ಶಿಕ್ಷಕಿ ಹರಿಣಿ ವಂದಿಸಿದರು. ತಾಂತ್ರಿಕ ಸಲಹೆಗಾರ ಜಯೇಂದ್ರ ಬಂದ್ಯಾನ್‌ರವರು ನಿರೂಪಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here