ಸುರುಳಿಮೂಲೆ ಶಾಲೆಗೆ ಶಿಕ್ಷಣಾಧಿಕಾರಿ ಭೇಟಿ-ಸುಖಾಂತ್ಯಗೊಂಡ ಹಿಜಾಬ್ ವಿವಾದ

0

ಪುತ್ತೂರು: ನೆ.ಮುಡ್ನೂರು ಗ್ರಾಮದ ಸುರುಳಿಮೂಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಹಿಜಾಬ್ ವಿವಾದ ಸುಖಾಂತ್ಯಗೊಂಡಿದೆ. ಮಾ.11ರಂದು ಕ್ಷೇತ್ರ ಶೀಕ್ಷಣಾಧಿಕಾರಿ ಲೋಕೇಶ್ ಸಿ ಅವರು ಶಾಲೆಗೆ ಭೇಟಿ ನೀಡಿ ಪೋಷಕರೊಂದಿಗೆ ಹಾಗೂ ಶಾಲಾ ಎಸ್‌ಡಿಎಂಸಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದು ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆ ಹಾಜರಾಗಲು ಪೋಷಕರು ಒಪ್ಪಿಗೆ ಸೂಚಿಸಿದ್ದಾರೆ. ನ್ಯಾಯಾಲಯದ ಮಧ್ಯಂತರ ತೀರ್ಪಿನ ಪ್ರಕಾರ ವಿದ್ಯಾರ್ಥಿನಿಯರು ತರಗತಿಯ ಒಳಗಡೆ ಹಿಜಾಬ್ ಧರಿಸಲು ಅವಕಾಶ ಇಲ್ಲದ ವಿಚಾರದ ಬಗ್ಗೆ ಶಿಕ್ಷಣಾಧಿಕಾರಿಯವರು ಪೋಷಕರಿಗೆ ಮನವರಿಕೆ ಮಾಡಿ ಕೊಟ್ಟರು. ನಂತರ ಶಾಲಾ ವಿದ್ಯಾರ್ಥಿಗಳನ್ನುದ್ದೇಶಿಸಿ ಶಿಕ್ಷಣಾಧಿಕಾರಿಯವರು ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಪ್ರೇಮ್ ಕುಮಾರ್, ನೆ.ಮುಡ್ನೂರು ಗ್ರಾ.ಪಂ ಉಪಾಧ್ಯಕ್ಷೆ ಫೌಝಿಯಾ ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು. ಕೋರ್ಟ್ ಆದೇಶ ಪ್ರಕಾರ ಮಕ್ಕಳು ತರಗತಿಗೆ ಹಿಜಾಬ್ ತೆಗೆದು ಬರಲು ಒಪ್ಪಿಕೊಂಡಿದ್ದು ಪೋಷಕರಿಗೂ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೇ ಮಾ.11ರಂದೇ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿ ಪ್ರವೇಶಿಸಿದ್ದಾರೆ. ಶಾಲೆಯ ವರೆಗೆ ಹಿಜಾಬ್ ಧರಿಸಿ ಬರುವುದಕ್ಕೆ ಯಾವುದೇ ಅಭ್ಯಂತರವಿಲ್ಲ, ತರಗತಿ ಒಳಗಡೆ ಮಾತ್ರ ಹಿಜಾಬ್ ತೆಗೆದು ಬರಬೇಕಾಗುತ್ತದೆ. ಸದ್ಯ ಸುರುಳಿಮೂಲೆ ಶಾಲೆಯಲ್ಲಿ ತಲೆದೋರಿದ್ದ ವಿವಾದ ಸೌಹಾರ್ದಯುತವಾಗಿ ಇತ್ಯರ್ಥಗೊಂಡಿದೆ ಎಂದು ಶಿಕ್ಷಣಾಧಿಕಾರಿ ಲೋಕೇಶ್ ಸಿ `ಸುದ್ದಿ’ಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here