ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಪೋಷಕರ ಸಭೆ ಮತ್ತು ಸಿಇಟಿ ಮಾಹಿತಿ ಕಾರ್ಯಾಗಾರ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿ ಪೋಷಕರ ಸಭೆ ಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯಿತು.

 


ಕಾರ್‍ಯಕ್ರಮದಲ್ಲಿ ಮುಖ್ಯ ಅತಿಥಿ ಶ್ರುತಕೀರ್ತಿ ಜೈನ್ ವಿದ್ಯಾರ್ಥಿಗಳಿಗೆ ಸಿಇಟಿ ಕೌನ್ಸಲಿಂಗ್ ಮತ್ತು ತಯಾರಿಯ ಕುರಿತು ಅಗತ್ಯ ಮಾಹಿತಿಗಳನ್ನು ನೀಡಿದರು. ಪ್ರಾಂಶುಪಾಲರಾದ ಎಚ್.ಕೆ. ಪ್ರಕಾಶ್ ಮಾತನಾಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಪೋಷಕರ ಪಾತ್ರ ಮತ್ತು ವಾರ್ಷಿಕ ಪರೀಕ್ಷೆಗಳ ಸ್ಥೂಲ ವಿವರಣೆಯನ್ನು ನೀಡಿದರು.

ಸಂಚಾಲಕರಾದ ಯುಜಿ. ರಾಧ ಮಾತನಾಡಿ ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ವ್ಯಕ್ತಿತ್ವವನ್ನು ಬೆಳೆಸುವ ಮೂಲಕ ದೇಶದ ಆಸ್ತಿಯಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಶೋಕ ಮೊಗ್ರು ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಲೋಕೇಶ್ ಸ್ವಾಗತಿಸಿ, ಭೌತಶಾಸ್ತ್ರ ಉಪನ್ಯಾಸಕಿ  ಸ್ವಾತಿ ಬಿಎಸ್. ವಂದಿಸಿದರು.

LEAVE A REPLY

Please enter your comment!
Please enter your name here