ಮಾ.14- ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರ ದೃಢ ಕಲಶ, ಶಿಲಾನ್ಯಾಸ ಸಮಾರಂಭ

0

ಪುತ್ತೂರು: ಇತ್ತೀಚೆಗೆ ಬ್ರಹ್ಮಕಲಶೋತ್ಸವ ನಡೆದಿರುವ ಮುಂಡೂರು ಗ್ರಾಮದ ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಮತ್ತು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ದೃಢ ಕಲಶವು ಮಾ.14 ರಂದು ನಡೆಯಲಿದೆ ಹಾಗೂ ಸುಮಾರು 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಭಾ ಮಂಟಪದ ಶಿಲಾನ್ಯಾಸ ಸಮಾರಂಭ ನಡೆಯಲಿದೆ. ಬೆಳಿಗ್ಗೆ ಗಣಪತಿ ಹವನ, ದೃಢ ಕಲಶ ಪೂಜೆ, ಪಂಚಗವ್ಯ, ಪಂಚಾಮೃತ ಅಭಿಷೇಕ, ಸಿಯಾಳ ಅಭಿಷೇಕ, ಪರಿಕಲಶ ಅಭಿಷೇಕ, ದೃಢಕಲಶಾಭಿಷೇಕ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

 

ಸಭಾ ಕಾರ್ಯಕ್ರಮ
ಬೆಳಿಗ್ಗೆ 10 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದು, ಮುಂಢೂರು ಮೃತ್ಯುಂಜೇಶ್ವರ ದೇವಸ್ಥಾನದ ಅಧ್ಯಕ್ಷರಾದ ಲೋಕಪ್ಪ ಗೌಡ ಕೆರೆಮನೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ.

ಮುಖ್ಯ ಅತಿತಿಗಳಾಗಿ ಆಲಡ್ಕ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಬಿ ವಿ ಶಗ್ರಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಜಯರಾಮ ರೈ ಮಿತ್ರಂಪಾಡಿ ಅಬುದಾಬಿ , ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷರಾದ ಪ್ರಕಾಶ್‌ಪುತ್ತೂರಾಯ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ರವಿಶೆಟ್ಟಿ ಮೂಡಂಬೈಲು ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಶ್ರೀರಂಗ ಶಾಸ್ತ್ರಿ ಮಣಿಲ, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷರಾದ ಸುರೇಶ್ ಕಣ್ಣಾರಾಯ, ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಮುರಳೀಧರ ಭಟ್ ಬಂಗಾರಡ್ಕ, ಬ್ರಹ್ಮಕಲಶೋತ್ಸವ ಸಮಿತಿ ಕರ್ಯದರ್ಶಿ ಭಾಸ್ಕರ ರೈ ಕೆದಂಬಾಡಿಗುತ್ತು, ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಹಾಸ ರೈ ಬೋಳೋಡಿ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ರತನ್‌ರೈ ಕುಂಬ್ರ, ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಕಡಮಜಲು ಸುಭಾಶ್ ರೈ, ಜೀಣೋಧ್ದಾರ ಸಮಿತಿ ಕಾರ್ಯದರ್ಶಿ ಭಾಸ್ಕರ ಬಲ್ಲಾಳ್ ಬೀಡು ಹಾಗೂ ದೇವಳದ ಅರ್ಚಕರಾದ ಸುಬ್ರಹ್ಮಣ್ಯ ಎನ್ ಕೆ ಭಾಗವಹಿಸಲಿದ್ದಾರೆ.ಸಭಾ ಕಾರ್ಯಕ್ರಮದ ನಂತರ
ಸೌಂಡ್ ಆಫ್ ಮೆಲೋಡಿ ಪುತ್ತೂರು , ಶ್ರೀ ಗೋಪಾಲಕೃಷ್ಣ ಮತ್ತು ಬಳಗದವರಿಂದ “ಭಕ್ತಿ ಭಾವ ಗಾನ”ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುವಂತೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾ ಕಾವು ಹೇಮನಾಥ ಶೆಟ್ಟಿ, ಜೀಣೋದ್ದಾರ ಸಮಿತಿ ಅಧ್ಯಕ್ಷರಾದ ಕುಡ್ಕಾಡಿ ಶೀನಪ್ಪ ರೈ ಕೊಡೆಂಕಿರಿ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬೋಳೋಡಿಗುತ್ತು ಅರುಣಕುಮಾರ ಆಳ್ವ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here