ಜವಳಿ ವ್ಯಾಪಾರಕ್ಕೆಂದು ಹೋದ   ಯುವಕರ ಮೇಲೆ ಮಾರಣಾಂತಿಕ ಹಲ್ಲೆ : ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಖಂಡನೆ

0

ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಲ್ಪಡಿ ಬಳಿ ಕಾರಿನಲ್ಲಿ ಜವಳಿ ವ್ಯಾಪಾರ ನಡೆಸುತ್ತಿದ್ದಇಬ್ಬರು ಯುವಕರ ಮೇಲೆ ವ್ಯಾಪಾರಕ್ಕೆತಡೆಯೊಡ್ಡಿ ಗಂಭೀರವಾಗಿ ಮರಣಾಂತಿಕ ಹಲ್ಲೆ ನಡೆಸಿ ಅವರ ಕಾರನ್ನು ಹಾನಿಗೊಳಿಸಲಾಗಿದ್ದು ಈ ಅಮಾನವೀಯ ಘಟನೆ ಯನ್ನು ತೀವ್ರವಾಗಿ ಖಂಡಿಸುತ್ತೇವೆ. ಹಾಗೂ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ನಡೆಸಿದ ದುಸ್ಕರ್ಮಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಬಂದಿಸಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡಿಪಿನಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಲ್ಲೆ ನಡೆಸಿರುವ ದುಷ್ಕರ್ಮಿಗಳಿಗೆ ಕಾನೂನಿನ ಯಾವುದೇ ಭಯ ಇಲ್ಲದೇ ಇದ್ದು,ಇಂತವರ ಮೇಲೆ ಕಠಿಣ ಕ್ರಮ ಕ್ಯೆಗೊಂಡು ಈ ರೀತಿಯ ಘಟನೆ ಮರುಕಳಿಸದಂತೆ ಪೊಲೀಸ್ ಇಲಾಖೆ ನೋಡಿ ಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here