ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನಿಂದ ಕಾರ್ಮಿಕರಿಗೆ ಗುರುತಿನ ಚೀಟಿ, ಇಲೆಕ್ಟ್ರೀಷಿಯನ್ ಕಿಟ್ ವಿತರಣೆ

0

 

ಪುತ್ತೂರು : ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿ ಮತ್ತು ಇಲೆಕ್ಟ್ರೀಷಿಯನ್ ಕಾರ್ಮಿಕರಿಗೆ ಇಲೆಕ್ಟ್ರೀಷಿಯನ್ ಕಿಟ್ ವಿತರಣಾ ಕಾರ್ಯಕ್ರಮ ದರ್ಬೆಯಲ್ಲಿರುವ ಟ್ರಸ್ಟ್‌ನ ಕಛೇರಿಯಲ್ಲಿ ನಡೆಯಿತು. 15 ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಮಾತನಾಡಿ ಟ್ರಸ್ಟ್‌ನ ಮೂಲಕ ಇದುವರೆಗೆ ಸುಮಾರು 3825 ಮಂದಿ ಕಾರ್ಮಿಕರಿಗೆ ಉಚಿತವಾಗಿ ಗುರುತಿನ ಚೀಟಿಯನ್ನು ಮಾಡಿಕೊಡಲಾಗಿದೆ. ಮೂರು ವರ್ಷಕ್ಕೊಮ್ಮೆ ಕಾರ್ಮಿಕರ ಗುರುತಿನ ಚೀಟಿಯನ್ನು ಟ್ರಸ್ಟ್ ನಮುಖಾಂತರ ಉಚಿತವಾಗಿ ನವೀಕರಣ ಮಾಡಿಕೊಡಲಾಗುವುದು ಎಂದು ಹೇಳಿ ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ವಿದ್ಯಾರ್ಥಿವೇತನ, ಮದುವೆ, ಅನಾರೋಗ್ಯದ ಚಿಕಿತ್ಸೆ, ಪಿಂಚಣಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಸದುಪಯೋಗ ಪಡೆಯುವಂತೆ ತಿಳಿಸಿದರು. ರವೀಂದ್ರ ಪೂಜಾರಿ ಸಂಪ್ಯ ಉಪಸ್ಥಿತರಿದ್ದರು. ಟ್ರಸ್ಟ್‌ನ ಸಿಬ್ಬಂದಿ ಲಿಂಗಪ್ಪ ಕುದ್ಮಾನು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಪ್ರವೀಣ್ ಸಹಕರಿಸಿದರು.

 

LEAVE A REPLY

Please enter your comment!
Please enter your name here