ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಮಹಿಳಾ ದಿನಾಚರಣೆ, ಸಮಾಜದಲ್ಲಿ ಮಹಿಳೆಯ ಪಾತ್ರ, ಮಹತ್ವ- ಮಾಹಿತಿ ಕಾರ್ಯಗಾರ

0

 

ಕಾಣಿಯೂರು: ಸಂಸ್ಕಾರ, ಸಂಸ್ಕೃತಿ ಉಳಿಸಿ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಹಿರಿದಾಗಿದೆ. ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರ ಬೆಳೆಸಿ, ಆದರ್ಶಯುತರನ್ನಾಗಿ ಮಾಡುವುದು ಮಹಿಳೆಯರ ಕರ್ತವ್ಯ. ಮಹಿಳೆಯರು ಇವತ್ತು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಬೇಕು, ಜೊತೆಗೆ ನಾಯಕತ್ವವನ್ನು ವಹಿಸಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ಪ್ರಮೀಳಾ ಉಮೇಶ್ ಕುದ್ಮಾರು ಹೇಳಿದರು. ಅವರು ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಭವನದಲ್ಲಿ ಮಾ ೧೩ರಂದು ನಡೆದ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು. ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ ನಾಗೇಶ್ ಕೆಡೆಂಜಿ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷರಾದ ಎ.ವಿ.ನಾರಾಯಣ ಗೌಡ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಕಾರ್ಯದರ್ಶಿ ಸುಂದರ ನಡುಬೈಲು, ಮಹಿಳಾ ಒಕ್ಕಲಿಗ ಗೌಡ ಸಂಘದ ತಾಲೂಕು ಅಧ್ಯಕ್ಷರಾದ ಮೀನಾಕ್ಷಿ, ಕಾರ್ಯದರ್ಶಿ ವನಜ, ವೀರಮಂಗಲ ಒಕ್ಕಲಿಗ ಗೌಡ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಭಾರತಿ, ಸವಣೂರು ವಲಯದ ಯುವ ಒಕ್ಕಲಿಗ ಸಂಘದ ಅಧ್ಯಕ್ಷ ಲೋಕೇಶ್ ಬಿ.ಎನ್, ವೀರಮಂಗಲ ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷ ಜಯಂತಿ, ವೀರಮಂಗಲ ಗ್ರಾಮ ಸಮಿತಿ ಅಧ್ಯಕ್ಷರಾದ ಬೆಳಿಯಪ್ಪ ಗೌಡ, ವೀರಮಂಗಲ ಗ್ರಾಮ ಪಂಚಾಯತ್ ಸದಸ್ಯರಾದ ವಸಂತಿ ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಭಾರತಿ ಪ್ರಾರ್ಥಿಸಿದರು. ಹರ್ಷಗುತ್ತು ಸ್ವಾಗತಿಸಿ, ಜೀನಿತ್ ಕೈಲಾಜೆ ವಂದಿಸಿದರು. ಸ್ವಸಹಾಯ ಸಂಘದ ಪ್ರೇರಕರಾದ ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

Please enter your comment!
Please enter your name here