ಕೊಲ್ಲಮೊಗ್ರದಲ್ಲಿ ಮದ್ಯದಂಗಡಿ ಆರಂಭ : ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ‌ ಚರ್ಚೆ

0

ವಿಶೇಷ ಗ್ರಾಮ ಸಭೆ ನಡೆಸಲು ನಿರ್ಧಾರ

ಕೊಲ್ಲಮೊಗ್ರು ಗ್ರಾ .ಪಂ. ನಲ್ಲಿ ಅ.25 ರಂದು ಕೊಲ್ಲಮೊಗ್ರು ಗ್ರಾ.ಪಂ. ವ್ಯಾಪ್ತಿಯ ಕೊಲ್ಲಮೊಗ್ರದಲ್ಲಿ ಪ್ರಾರಂಭವಾಗಿರುವ ಮಧ್ಯ ಮಾರಾಟ ಕೇಂದ್ರದ ಬಗ್ಗೆ ಚರ್ಚಿಸಲು ಸಾಮಾನ್ಯ ಸಭೆ ನಡೆಯಿತು. ಗ್ರಾ.ಪಂ ಅಧ್ಯಕ್ಷರಾದ ಉದಯ ಕೊಪ್ಪಡ್ಕ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.


ಮದ್ಯ ಮಾರಾಟ ಕೇಂದ್ರ ನಡೆಸಲು ಯಾವುದೇ ಪರವಾನಿಗೆ ಅಥವಾ ನಿರಾಕ್ಷೇಪಣಾ ಪತ್ರ ನೀಡಿಲ್ಲ , ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಯಿತು. ಈ ಬಗ್ಗೆ ಗ್ರಾಮಸ್ಥರ ಬೇಡಿಕೆಯಂತೆ ವಿಶೇಷ ಗ್ರಾಮ ಸಭೆ ನಡೆಸಲು ಸರ್ವಾನುಮತದಿಂದ ನಿರ್ಣಯಿಸಲಾಯಿತು . ಗ್ರಾ. ಪಂ. ಉಪಾಧ್ಯಕ್ಷರಾದ ಜಯಶ್ರೀ ಚಾಂತಾಳ, ಸದಸ್ಯರುಗಳಾದ ಮಾಧವ ಚಾಂತಾಳ, ಶುಭಲತಾ ಕಟ್ಟ, ಶಿವಮ್ಮ ಕಟ್ಟ, ಪುಷ್ಪರಾಜ್ ಪಡ್ಪು, ಮೋಹಿನಿ ಕಟ್ಟ ಅಶ್ವಥ್ ಯಲದಾಳು ಹಾಜರಿದ್ದರು. ಪಂಚಾಯತು ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ ಸ್ವಾಗತಿಸಿ, ವಂದಿಸಿದರು.

 

LEAVE A REPLY

Please enter your comment!
Please enter your name here