ಹಿಜಾಬ್ ತೀರ್ಪು ಹಿನ್ನೆಲೆ : ಪುತ್ತೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

0

ಪುತ್ತೂರು: ಶಿಕ್ಷಣ ಸಂಸ್ಥೆಗಳಿಗೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬರಬಹುದೇ, ಬರಬಾರದೇ ಎಂಬುದರ ಕುರಿತು ಹೈಕೋರ್ಟ್  ತೀರ್ಪು ಪ್ರಕಟಿಸುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬಂದೋಬಸ್ತ್ ಬಗ್ಗೆ ಸೂಚನೆಗಳನ್ನು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್  ನೀಡಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬೆಳಿಗ್ಗೆ ಪೊಲೀಸರಿಗೆ ರೋಲ್‌ಕಾಲ್ ಮಾಡಿ ಆಯಾ ಕಟ್ಟಿನ ಜಾಗದಲ್ಲಿ ಬಿಗಿ ಬಂದೋಬಸ್ತ್ ಮಾಡುವಂತೆ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ. ಅಹಿತಕರ ಘಟನೆಗಳು ಕಂಡು ಬಂದಲ್ಲಿ ಕ್ಷಿಪ್ರ ಕಾರ್ಯಾಚರಣೆಗಾಗಿ ಕೆ.ಎಸ್.ಆರ್.ಪಿ ತುಕಡಿಯನ್ನು ಇರಿಸಲಾಗಿದೆ. ಬೆಳಗ್ಗೆಯಿಂದಲೇ ಪೊಲೀಸರು ಬಂದೋಬಸ್ತ್ ಕಾರ್ಯದಲ್ಲಿ ನಿರತರಾಗಿದ್ದಾರೆ. ಜಿಲ್ಲಾಧಿಕಾರಿ ಈಗಾಗಲೇ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈ ನಡುವೆ 144 ನಿಷೇಧಾಜ್ಞೆ ಹೇರಲಾಗಿದೆ.ಈ ಮಧ್ಯೆ  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

LEAVE A REPLY

Please enter your comment!
Please enter your name here