ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ:  ಹಿಜಾಬ್ ಧರಿಸಲು ಅವಕಾಶ ಇಲ್ಲ –  ಮಹತ್ವದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್  

0

 

ಪುತ್ತೂರು: ಶಾಲಾ ಕಾಲೇಜುಗಳಲ್ಲಿ ಸರಕಾರ ನಿಗದಿ ಪಡಿಸಿದ ಸಮವಸ್ತ್ರ ಧರಿಸುವುದು ಕಡ್ಡಾಯ. ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಾ.15ರಂದು ಮಹತ್ವದ  ತೀರ್ಪು ನೀಡಿದೆ. ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನಿರಾಕರಿಸಿದ್ದನ್ನು ಪ್ರಶ್ನಿಸಿ ಉಡುಪಿ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಬಳಿಕ ಮುಖ್ಯ ನ್ಯಾಯಮೂರ್ತಿಯವರನ್ನೊಳಗೊಂಡ ತ್ರಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತ್ತು. ಹಿಜಾಬ್ ವಿಚಾರ ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಹಿಜಾಬ್ ಇಸ್ಲಾಂ ಧರ್ಮದ  ಅಗತ್ಯ ಭಾಗವಲ್ಲ, ಎಲ್ಲಾ ವಿದ್ಯಾರ್ಥಿಗಳು  ಸಮವಸ್ತ್ರ ಧರಿಸುವ ಆದೇಶ ಪಾಲಿಸಬೇಕು. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಿದೆ ಎಂದು ಮಹತ್ವದ ತೀರ್ಪು ನೀಡಲಾಗಿದ್ದು ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಿದ್ದ  ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪುತ್ತೂರು, ಕಡಬ ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

LEAVE A REPLY

Please enter your comment!
Please enter your name here