ಪುತ್ತೂರು ಕೋಟಿ-ಚೆನ್ನಯ ಕಂಬಳದ ಅತಿಥಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದ ಕಂಬಳ ಸಮಿತಿ

0

ಪುತ್ತೂರು: ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮಾ.19, 20ರಂದು ನಡೆಯುವ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಮಂತ್ರಣ ಪತ್ರಿಕೆ ನೀಡಿ ಕಂಬಳಕ್ಕೆ ಆಹ್ವಾನಿಸಲಾಯಿತು. ೨೯ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯ ಅತಿಥಿಯಾಗಿದ್ದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪ್ರಣಮ್ ಶೆಟ್ಟಿ, ಬಿಪಿನ್ ಶೆಟ್ಟಿ ಹಾಗೂ ಮತ್ತಿತರರು ಬೆಂಗಳೂರಿಗೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

LEAVE A REPLY

Please enter your comment!
Please enter your name here