ರಾಜ್ಯಮಟ್ಟದ ನರೇಗಾ ಹಬ್ಬ : ಕಡಬ ತಾಲೂಕಿನ ತಾಲೂಕು ಮಾಹಿತಿ, ಶಿಕ್ಷಣ, ಸಂವಹನ ಸಂಯೋಜಕ ಭರತ್ ರಾಜ್ ಕೆ.ರವರಿಗೆ ನರೇಗಾ ಪ್ರಶಸ್ತಿ

0

ಪುತ್ತೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2021-22ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರಾಜ್ಯಮಟ್ಟದಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿ ಕಾಯಕಬಂದು ಮತ್ತು ವೈಯಕ್ತಿಕ ಫಲಾನುಭವಿಗಳಿಗೆ ಮಾ.14ರಂದು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ರಾಜ್ಯಮಟ್ಟದ ನರೇಗಾ ಹಬ್ಬ-2022 ರಲ್ಲಿ ಕಡಬ ತಾಲೂಕಿನ ತಾಲೂಕು ಮಾಹಿತಿ, ಶಿಕ್ಷಣ, ಸಂವಹನ ಸಂಯೋಜಕ ಭರತ್ ರಾಜ್ ಕೆ.ರವರನ್ನು ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿ ಸಿಬ್ಬಂದಿ, ಕಾಯಕಬಂದು ಇತರ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯವು ನಡೆಸಿದ ರಾಜ್ಯ ಮಟ್ಟದ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ದ.ಕ.ಜಿಲ್ಲೆಯ ಮೂವರನ್ನು ನರೇಗಾ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. 31 ಜಿಲ್ಲೆಗಳ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್‌ಗಳ ಆಯ್ದ ವಿಭಾಗವಾರು ಸಾಧನೆಯ ಮೇಲೆ ಪ್ರಶಸ್ತಿ ಪ್ರದಾನ ನಡೆಯಿತು. ಭರತ್‌ರಾಜ್‌ರವರು ಕೊಳ್ತಿಗೆ ಗ್ರಾಮದ ಕರ್ತಡ್ಕ ನಿವಾಸಿಯಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರಪ್ಪ, ವಿಧಾನ ಪರಿಷತ್ ಸಭಾಪತಿ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ಶಿವಾಜಿನಗರ ಶಾಸಕ ರಿಜ್ವಾನ್ ಅಷರ್ದ್, ವಿಧಾನ ಪರಿಷತ್ ಶಾಸಕ ದೇವೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅತಿಕ್ ಎಲ್.ಕೆ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಶಿಲ್ಪಾ ನಾಗ್ ಮತ್ತಿತರ ಗಣ್ಯರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here