ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ದ.ಕ.ಜಿಲ್ಲಾ ಪಂಚಾಯತ್ ಕಾರ್ಯಾಲಯ ಭೇಟಿ

0

 

ಪುತ್ತೂರು: ನೆಹರೂನಗರದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮೂರನೇ ವರ್ಷದ ವಿದ್ಯಾರ್ಥಿಗಳು ಹಾಗೂ ಬೋಧಕರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಜಿಲ್ಲಾ ಪಂಚಾಯತ್ ಕಾರ್ಯಲಯದ ಮುಖ್ಯ ಕಾರ್ಯಾನಿರ್ವಹಣಾಧಿಕಾರಿ ಡಾ.ಕುಮಾರ್‌ರವರು ಜಿಲ್ಲಾ ಪಂಚಾಯತ್‌ನ ಕಾರ್ಯಗಳು, ಅಧಿಕಾರ, ನೇಮಕಾತಿ, ಪಂಚಾಯತ್‌ನ ಮುಖ್ಯ ಕಾರ್ಯಗಳು, ಗ್ರಾಮಗಳ ಅಭಿವೃದ್ಧಿ, ಚುನಾವಣೆಗಳ ಬಗ್ಗೆ ಮಾಹಿತಿ ತಿಳಿಸಿ ಭವಿಷ್ಯದ ಗುರಿಯನ್ನು ಸಾಧಿಸಲು ಕಠಿಣ ಪರಿಶ್ರಮ ಹಾಗೂ ನಿರ್ಧಿಷ್ಟತೆ ಇರಬೇಕು ಎಂದರು. ವಿದ್ಯಾರ್ಥಿಗಳು ಮಾಹಿತಿಗಳನ್ನು ವಿಮರ್ಶಿಸಿ ತಿಳಿದುಕೊಂಡರು. ಕಾಲೇಜಿನ ಆಡಳಿತಾತ್ಮಕ ಕಾನೂನು ವಿಭಾಗದ ಪ್ರಾಧ್ಯಾಪಕ ಕೌಶಿಕ್ ಸಿ. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅರ್ಪಿತಾ ಪ್ರಶಾಂತ್ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here