ಮಾ.19: ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ 29ರ ಸಂಭ್ರಮ

0

  • ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಚಲನಚಿತ್ರ ನಟ ವಿಜಯರಾಘವೇಂದ್ರ, ನವಿನ್ ಡಿ. ಪಡೀಲ್, ಪ್ರಸನ್ನ ಬಾಗೀನ ವಿಶೇಷ ಆಕರ್ಷಣೆ

 


ಪುತ್ತೂರು: ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಮಾ.19 ಮತ್ತು 20ರಂದು ತನ್ನ ೨೯ನೇ ಸಂಭ್ರಮದೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿರವರ ಗೌರವ ಉಪಸ್ಥಿತಿಯಲ್ಲಿ ಇತಿಹಾಸ ಪ್ರಸಿದ್ಧ ತುಳುನಾಡ ಜಾನಪದ ಕ್ರೀಡೆಗಳಲ್ಲೊಂದಾದ ಕೋಟಿ-ಚೆನ್ನಯ ಜೋಡುಕರೆ ಕಂಬಳ ನಡೆಯಲಿದೆ.

ಮಾ.19ರಂದು ಪೂರ್ವಾಹ್ನ 10.30ಕ್ಕೆ ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಕಂಬಳವನ್ನು ಉದ್ಘಾಟಿಸಲಿದ್ದಾರೆ. ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಭಾಕಾರ್ಯಕ್ರಮ : ಸಂಜೆ 6ರಿಂದ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಹಿಸಲಿದ್ದಾರೆ. ಮಾಜಿ ಸಚಿವರಾದ ಶ್ಯಾಮನೂರು ಶಿವಶಂಕರಪ್ಪ, ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್, ಎಸ್.ಎಸ್. ಮಲ್ಲಿಕಾರ್ಜುನ, ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೋ, ಸೇರಿದಂತೆ ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬಹುಮಾನ ವಿತರಣೆ: ಮಾ.20ರಂದು ಪೂರ್ವಾಹ್ನ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಚಿವ ಸುನಿಲ್ ಕುಮಾರ್, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶೇಷ ಆಕರ್ಷಣೆ/ಸನ್ಮಾನಿತರು..

ಕಂಬಳದಲ್ಲಿ ವಿಶೇಷ ಆಕರ್ಷಣೆಯಾಗಿ ಚಲನ ಚಿತ್ರ ನಟರಾದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್, ವಿಜಯ ರಾಘವೇಂದ್ರ(ಚಿನ್ನಾರಿಮುತ್ತ), ರೋರಿಂಗ್ ಸ್ಟಾರ್ ಶ್ರೀ ಮುರಳಿ, ವಿನೋದ್ ಆಳ್ವ, ತುಳು ಚಲನಚಿತ್ರ ನಟ ಕುಸಲ್ದರೆಸೆ ನವೀನ್ ಡಿ ಪಡೀಲ್, ಗರುಡ ರಾಮ್(ಕೆಜಿಎ-ನಟ) ವಿನಯ ಬಿಡ್ಡಪ್ಪ (ಕೆಜಿಎ- ನಟ), ಪ್ರಸನ್ನ ಬಾಗೀನ (ಭಜರಂಗಿ-೨ ಖ್ಯಾತಿಯ ನಟಿ), ಚಲನ ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಭಾಗವಹಿಸಲಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ ಅಮೈ, ಕಂಬಳ ಕ್ಷೇತ್ರದ ಸಾಧಕರಾದ ಕೇಶವ ಬಂಡಾರಿ ಬೆಳ್ಳಿಪ್ಪಾಡಿ ಕೈಪ ಸೇರಿದಂತೆ ವಿವಿಧ ಸಾಧಕರನ್ನು ಕಾರ್‍ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.

ಕಂಬಳದಲ್ಲಿ ಸುಮಾರು 200 ಜೊತೆ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ. ವಿಜೇತ ಕನಹಲಗೆ, ಹಗ್ಗ ಹಿರಿಯ ಮತ್ತು ನೇಗಿಲು ಹಿರಿಯ ಕೋಣಗಳಿಗೆ ಪ್ರಥಮ 2ಪವನ್ ಚಿನ್ನ, ದ್ವಿತೀಯ 1 ಪವನ್ ಚಿನ್ನ, ವಿಜೇತ ಅಡ್ಡ ಹಲಗೆ, ಹಗ್ಗ ಕಿರಿಯ ಮತ್ತು ನೇಗಿಲು ಹಿರಿಯ ಕೋಣಗಳಿಗೆ ಪ್ರಥಮ 1 ಪವನ್ ಚಿನ್ನ, ದ್ವಿತೀಯ ಅರ್ಧ ಪವನ್ ಚಿನ್ನ ಹಾಗೂ ಕೋಟಿ ಚೆನ್ನಯ ಟ್ರೋಫಿ ನೀಡಿ ಗೌರವಿಸಲಾಗುವುದು.

LEAVE A REPLY

Please enter your comment!
Please enter your name here