ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಕುಟುಂಬ ಸಮ್ಮಿಲನ ಕಾರ್ಯಕ್ರಮ

0

 

 

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಕುಟುಂಬ ಸಮ್ಮಿಲನ ಕಾರ್ಯಕ್ರಮ ಅಕ್ಟೋಬರ್ 27ರಂದು ವೃತ ನಿರೀಕ್ಷಕರ ಕಚೇರಿ ಆವರಣದಲ್ಲಿ ನಡೆಯಿತು.
ಸಂಜೆ ಆರಂಭಗೊಂಡ ಈ ಕಾರ್ಯಕ್ರಮದ ಉದ್ಘಾಟನೆಯನ್ನು ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ದೀಪ ಬೆಳಗಿಸಿ ಚಾಲನೆ ನೀಡಿದರು.


ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು,ಹಾಗೂ ಕುಟುಂಬದ ಮಹಿಳಾ ಸದಸ್ಯರು, ಪುಟಾಣಿ ಮಕ್ಕಳು, ಸಾರ್ವಜನಿಕರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತಗೊಂಡವರಿಗೆ, ಮತ್ತು ಭಾಗವಹಿಸಿದ ಎಲ್ಲಾ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹಕರ ಬಹುಮಾನವನ್ನು ನೀಡಿ ಗೌರವಿಸಲಾಯಿತು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪುತ್ತೂರು ಡಿ ವೈ ಎಸ್ ಪಿ ವೀರಯ್ಯ ಹಿರೇಮಠ್ ಭಾಗವಹಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.
ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಗಳ, ಕಲ್ಲುಗುಂಡಿ ಔಟ್ ಪೋಸ್ಟ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಕುಟುಂಬದ ಸದಸ್ಯರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್, ಬೆಳ್ಳಾರೆ ಠಾಣಾ ಉಪನಿರೀಕ್ಷಕ ಸುಹಾಸ್, ಕ್ರೈಂ ಎಸ್‌ಐ ಆನಂದ್, ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಮಂಜುನಾಥ್, ಪ್ರೊಬೆಷನರಿ ಎಸ್‌ಐ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

ನಿವೃತ್ತ ಏ ಎಸ್ ಐ ಭಾಸ್ಕರ್ , ವೃತ್ತ ನಿರೀಕ್ಷಕರ ಕಚೇರಿ ಹೆಡ್ ಕಾನ್ಸ್ಟೇಬಲ್ ದೇವರಾಜ್ ಕಾರ್ಯಕ್ರಮ ನಿರೂಪಿಸಿ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here