ಕುಡ್ತಮುಗೇರು:  ಸ್ಕೂಲ್ ಬಸ್ಸ್ – ಕಾರಿನ ನಡುವೆ ಅಪಘಾತ

0

 

ವಿಟ್ಲ: ಸ್ಕೂಲ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ಕುಡ್ತಮುಗೇರು ಸಮೀಪದ ಮಂಕುಡೆ ಸಮೀಪದ ಕಲ್ಕಾಜೆ ಎಂಬಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಿಂದಾಗಿ ಬಸ್ಸಿಗೂ ಹಾನಿಯಾಗಿದೆ‌. ಘಟನಾ ಸ್ಥಳಕ್ಕೆ ತೆರಳಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಯಾವುದೇ ಕೇಸು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here