ಸುಳ್ಯ ಎನ್ನೆಂಸಿ ಮತ್ತು ಎನ್ನೆಂಪಿಯು ಕಾಲೇಜುಗಳ ಸಹಯೋಗದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

0

 

ಸುಳ್ಯದ ನೆಹರು ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಸಹಭಾಗಿತ್ವದಲ್ಲಿ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಕೋಟಿ ಕಂಠ ಗಾಯನ ನನ್ನ ನಾಡು ನನ್ನ ಹಾಡು ಕಾರ್ಯಕ್ರಮ ಅ.28ರಂದು ನಡೆಯಿತು.


ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ವಿದ್ಯಾರ್ಥಿನಿ ನಿಶ್ವಿತ ಮತ್ತು ಬಳಗದವರು ಹಾಗೂ ಪದವಿ ವಿಭಾಗದ ವಿದ್ಯಾರ್ಥಿನಿ ಅನಘ ಮತ್ತು ತಂಡದವರು ಮತ್ತು ವಿದ್ಯಾರ್ಥಿ ವೃಂದದವರು ಹಾಡುಗಳನ್ನು ಸಾದರಪಡಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ,ಪದವಿ ವಿಭಾಗದ ಪ್ರಾoಶುಪಾಲ ಪ್ರೊ.ರುದ್ರ ಕುಮಾರ್ ಎಂ.ಎಂ,ಪದವಿ ಪೂರ್ವ ವಿಭಾಗದ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ,ಎರಡು ಸಂಸ್ಥೆಗಳ ಬೋಧಕ -ಬೋಧಕೇತರ ವೃಂದದವರು ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪದವಿ ವಿಭಾಗದ
ಪ್ರಾoಶುಪಾಲರಾದ ಪ್ರೊ ರುದ್ರ ಕುಮಾರ್ ಎಂ ಎಂ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್ನೆoಸಿಯ ಕನ್ನಡ ವಿಭಾಗದ ಮುಖ್ಯಸ್ಥ, ಕೋಟಿ ಕಂಠ ಗಾಯನ ಕಾರ್ಯಕ್ರಮದ ನೋಡೆಲ್ ಅಧಿಕಾರಿ ಪ್ರೊ ಸಂಜೀವ ಕುದ್ಪಾಜೆ ಸಂಕಲ್ಪ ವಿಧಿ ಬೋಧಿಸಿದರು. ಪ ಪೂ ವಿಭಾಗದ ಪ್ರಾoಶುಪಾಲರಾದ ಶ್ರೀಮತಿ ಹರಿಣಿ ಪುತ್ತೂರಾಯ ವಂದಿಸಿದರು. ಪ.ಪೂ. ವಿಭಾಗದ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ. ನಿರೂಪಿಸಿದರು.

LEAVE A REPLY

Please enter your comment!
Please enter your name here