ಮಾ.19: ಪಾಣಾಜೆಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮವಾಸ್ತವ್ಯ

0

ಪುತ್ತೂರು : ಕರ್ನಾಟಕ ಸರಕಾರ, ಪುತ್ತೂರು ತಾಲೂಕು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪುತ್ತೂರು ತಾಲೂಕು ತಹಶೀಲ್ದಾರರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾ.19ರಂದು ಬೆಳಿಗ್ಗೆ 10ರಿಂದ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿರುತ್ತಾರೆ. ಕಂದಾಯ ಇಲಾಖೆ ಮತ್ತು ಇನ್ನಿತರ ಇಲಾಖೆಗಳ ವಿವಿಧ ಸವಲತ್ತುಗಳನ್ನು ನೀಡಲಾಗುವುದು. ಅರ್ಹ ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲು ಕ್ರಮ ಜರಗಿಸಲಾಗುವುದು. ಆದುದರಿಂದ ಪಾಣಾಜೆ ಗ್ರಾಮದ ಎಲ್ಲಾ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here