ಮಾ.20: ರೋಟರಿ ಕ್ಲಬ್‌ನಿಂದ ಉಚಿತ ಕೃತಕ ದಂತಪಂಕ್ತಿ ಜೋಡಣಾ ಶಿಬಿರ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು, ಎ.ಬಿ ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಮಹಾವಿದ್ಯಾಲಯ, ಒಕ್ಕಲಿಗ ಗೌಡ ಸೇವಾ ಸಂಘ, ಸರಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಬಾಯಿಯ ಆರೋಗ್ಯ ದಿನ ಮತ್ತು ಉಚಿತ ಕೃತಕ ದಂತಪಂಕ್ತಿ ಜೋಡಣಾ ಶಿಬಿರವು ಮಾ.20ರಂದು ಬೆಳಿಗ್ಗೆ ತೆಂಕಿಲ ಒಕ್ಕಲಿಗ ಗೌಡ ಸುಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಸಹಾಯಕ ಆಯುಕ್ತ ಗಿರೀಶ್ ನಂದನ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ರೋಟರಿ ಕ್ಲಬ್ ಅಧ್ಯಕ್ಷ ಮಧು ನರಿಯೂರು ಅಧ್ಯಕ್ಷತೆ ವಹಿಸಲಿದ್ದಾರೆ. ಎ.ಬಿ ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಮಹಾವಿದ್ಯಾಲಯದ ವಿಭಾಗೀಯ ಮುಖ್ಯಸ್ಥ ಡಾ.ಚೇತನ್ ಹೆಗ್ಡೆ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಕೆ.ವಿಶ್ವನಾಥ ಗೌಡ, ಭಾರತೀಯ ದಂತ ವೈದ್ಯಕೀಯ ಸಂಘದ ಅಧ್ಯಕ್ಷೆ ಡಾ.ಅಮೃತ ಕೆ.ಪ್ರಸಾದ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಹಲ್ಲಿನ ಸಮಸ್ಯೆಯಿರುವವರು ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂದು ರೋಟರಿ ಕ್ಲಬ್ ಅಧ್ಯಕ್ಷ ಮಧು ನರಿಯೂರು ತಿಳಿಸಿದರು.

LEAVE A REPLY

Please enter your comment!
Please enter your name here