ಕಾಂಚನ ಪೆರ್ಲ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷ ರೂ.,ದೇಣಿಗೆ

0

ನೆಲ್ಯಾಡಿ: ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಡಬ ತಾಲೂಕಿನ ಆಲಂತಾಯ ಗ್ರಾಮದ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ2 ಲಕ್ಷ ರೂ.,ದೇಣಿಗೆ ನೀಡಲಾಯಿತು.

 


ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣರವರು 2 ಲಕ್ಷ ರೂ.,ಮೊತ್ತದ ಚೆಕ್ ಅನ್ನು ದೇವಸ್ಥಾನದ ಸಮಿತಿಯವರಿಗೆ ಹಸ್ತಾಂತರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಬಡೆಕ್ಕಿಲ್ಲಾಯ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ವೆಂಕಪ್ಪ ಗೌಡ ಪೆರ್ಲ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾರ್ದನ ಗೌಡ ಬರಮೇಲು, ಕೋಶಾಧಿಕಾರಿ ರಮೇಶ್ ಭಟ್ ಬಿ.ಜಿ., ಜೊತೆ ಕಾರ್ಯದರ್ಶಿ ಮಹೇಶ್ ಆಚಾರ್ಯ ಪಾತೃಮಾಡಿ, ಶ್ರೀ ಷಣ್ಮುಖ ದೇವಸ್ಥಾನ ಟ್ರಸ್ಟ್‌ನ ಸದಸ್ಯೆ ಗುಲಾಬಿ ಶೆಟ್ಟಿ ಪುರ, ಪ್ರಚಾರ ಮತ್ತು ಮಾಧ್ಯಮ ಸಮಿತಿ ಸಂಚಾಲಕ ಮೂಲಚಂದ್ರ ಪ್ರಭು ಹಳೆಕಾಂಚನ, ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್‌ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here