ನಾಳೆ ಎಲಿಮಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

0

ಅಕ್ಟೋಬರ್ 30 ಆದಿತ್ಯವಾರದಂದು ಎಲಿಮಲೆ ಪ್ರೌಢ ಶಾಲೆಯಲ್ಲಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಹಾಗೂ ಸ್ಥಳೀಯ ಸಂಘ ಸಂಸ್ಥೆ ಗಳ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ.
ಶಿಬಿರವನ್ನು ರಾಜ್ಯ ಒಕ್ಕಲಿಗ ಸಂಘ ದ ಉಪಾಧ್ಯಕ್ಷ , ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಗೌರವ ಸಲಹೆಗಾರರಾದ ಡಾ। ರೇಣುಕಾಪ್ರಸಾದ್ ಕೆ.ವಿ. ಉದ್ಘಾಟಿಸಲಿದ್ದು, ತಹಶೀಲ್ದಾರ್ ಅನಿತಾಲಕ್ಷ್ಮಿ, ಬಿ ಇ ಓ ಮಹಾದೇವ ಎಸ್. ಪಿ., ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಕೆ.ಎಂ, ದೇವಚಳ್ಳಗ್ರಾಮಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ, ನೆಲ್ಲೂರು ಕೆಮ್ರಾಜೆ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮೋಹನ ರಾಮ ಸುಳ್ಳಿ, ನೆಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸುವರು ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here