ಕೋಡಿಂಬಾಡಿ ಮಠದಬೆಟ್ಟು ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

0

ಪುತ್ತೂರು : ಕೋಡಿಂಬಾಡಿ ಮಠದಬೆಟ್ಟು ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಮತ್ತು ಜಾತ್ರೋತ್ಸವ ಮಾ.18ರಂದು ಕ್ಷೇತ್ರದ ತಂತ್ರಿ ವೇ.ಮೂ.ಬ್ರಹ್ಮಶ್ರೀ ಪಾವಂಜೆ ವಾಗೀಶ ಶಾಸ್ತ್ರೀರವರ ನೇತೃತ್ವದಲ್ಲಿ ನಡೆಯಿತು. ಬೆಳಿಗ್ಗೆ 7ರಿಂದ ದೇವತಾ ಪ್ರಾರ್ಥನೆ, ಪಂಚವಿಂಶತಿ ಕಲಶ ಪ್ರತಿಷ್ಠೆ, ಗಣಪತಿ ಹೋಮ, ಅಧಿವಾಸ ಹೋಮ, ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, ಲಲಿತಾ ಸಹಸ್ರನಾಮ ಪಾರಾಯಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಟಿ.ಅಣ್ಣಪ್ಪಯ್ಯ ತೆಂಕಿಲ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಕೃಷ್ಣ ರಾವ್ ಬೆಂಗಳೂರು, ಅರ್ಚಕ ಯಂ.ನಾಗೇಶ ಶರ್ಮ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here