ಕೆಯ್ಯೂರು ಗ್ರಾಪಂ ಮಹಿಳಾ ಗ್ರಾಮಸಭೆ, ಸನ್ಮಾನ

0

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್‌ನ 2021-22 ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಮಾ.19ರಂದು ಕೆಯ್ಯೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿಯವರು ಸಭಾಧ್ಯಕ್ಷತೆ ವಹಿಸಿದ್ದ ಮಹಿಳಾ ಜಾಗೃತಿಯ ಬಗ್ಗೆ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಮೇಲ್ವಿಚಾರಕಿ ಆರತಿಯವರು, ಮಹಿಳೆಯರ ಜಾಗೃತಿ ಮತ್ತು ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ತಿಂಗಳಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ನೇತ್ರಾರವರು, ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಸನ್ಮಾನ
ಕೆಯ್ಯೂರು ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಯಾಗಿ ನಿವೃತ್ತಗೊಂಡ ಸುಬ್ರಹ್ಮಣ್ಯ ಕೆ.ಎಂರವರನ್ನು ಈ ಸಂದರ್ಭದಲ್ಲಿ ದುರ್ಗಾಂಭಿಕಾ ಸಂಜೀವಿನಿ ಒಕ್ಕೂಟ ಕೆಯ್ಯೂರು ಇದರ ವತಿಯಿಂದ ಸನ್ಮಾನಿಸಲಾಯಿತು. ಶಾಲು, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಗಿರಿಜಾ ಕಣಿಯಾರು, ಸದಸ್ಯರುಗಳಾದ ಮೀನಾಕ್ಷಿ ವಿ.ರೈ, ಸುಮಿತ್ರ ಪಲ್ಲತ್ತಡ್ಕ, ಅಮಿತಾ ಎಚ್.ರೈ, ಜಯಂತ ಪೂಜಾರಿ ಕೆಂಗುಡೇಲು, ವಿಜಯ ಕುಮಾರ್, ನಬಾರ್ಡ್ ಸಂಯೋಜಕಿ ಗೀತಾ, ದುರ್ಗಾಂಭಿಕಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿಜಯ ದಟ್ಟ, ಎಂಬಿಕೆ ರೂಪ ಎಸ್.ರೈ, ಎಲ್‌ಸಿಆರ್‌ಪಿ ಯಶಸ್ವಿ,  ಮತ್ತಿತರರು ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ಶಿವಪ್ರಸಾದ್, ರಾಕೇಶ್, ಧರ್ಮಣ್ಣ ಸಹಕರಿಸಿದ್ದರು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here