29ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಕಂಬಳ ಉದ್ಘಾಟನೆ

0

  • ಕಂಬಳ ಕ್ರೀಡೆಗೆ ಅಂತಾರಾಷ್ಟ್ರೀಯ ಮಟ್ಟದಿಂದ ಜನ ಆಗಮಿಸುವಂತಾಗಬೇಕು-ಕೇಶವ ಪ್ರಸಾದ್ ಮುಳಿಯ

 

ಪುತ್ತೂರು: ಜಾನಪದ ಕ್ರೀಡೆಗಳಲ್ಲೊಂದಾದ ಇತಿಹಾಸ ಪ್ರಸಿದ್ಧ ಪುತ್ತೂರು 29ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಉದ್ಘಾಟನೆ ಮಾ.19ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ದೇವರ ಮಾರುಗದ್ದೆಯಲ್ಲಿ ನಡೆಯಿತು. ಎರಡು ದಿನಗಳ ನಿರಂತರ ನಡೆಯುವ ಹೊನಲು ಬೆಳಕಿನ ಈ ಕಂಬಳದ ಉದ್ಘಾಟನೆಯನ್ನು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್‌ರವರು ತೆಂಗಿನಕಾಯಿ ಒಡೆಯುವ ಮೂಲಕ ನೆರವೇರಿಸಿ ಮಾತನಾಡಿ ನಮ್ಮ ದೇಶದ ಸಂಸ್ಕತಿಯನ್ನು ಬಿಂಬಿಸುವ ಕಂಬಳದಲ್ಲಿ ಮಿತ್ರತ್ವ ಬೆಳೆಯಲು ಸಹಕಾರಿಯಾಗಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ಕಡೆಗಳಿಂದ ಈ ಕ್ರೀಡೆಗೆ ಜನರು ಆಗಮಿಸುತ್ತಿದ್ದು ಇನ್ನು ಅಂತರಾಷ್ಟ್ರೀಯ ಮಟ್ಟದಿಂದ ಜನರು ಬರುವಂತಾಗಬೇಕು. ಆ ಮೂಲಕ ಜಾನಪದ ಕಂಬಳ ಕ್ರೀಡೆಯ ಮಹತ್ವವನ್ನು ಎಲ್ಲಾ ಕಡೆ ಪಸರಿಸುವಂತಾಗಬೇಕು ಎಂದು ಅವರು ಹೇಳಿದರು. ಕಂಬಳ ಕ್ರೀಡೆ ಅದೊಂದು ಮನೋಸ್ಥ್ಯೆರ್ಯ ತುಂಬಿದ ಗ್ರಾಮೀಣ ಮಟ್ಟದ ಜನಪ್ರಿಯ ಜಾನಪದ ಕ್ರೀಡೆಯಾಗಿದ್ದು ಎಲ್ಲಾ ಕಡೆಗಳಲ್ಲಿ ಈ ಕ್ರೀಡೆ ಬೆಳೆಯಲಿ ಎಂದು ಹೇಳಿದರು. ಈ ಕ್ರೀಡೆಯನ್ನು ಆಯೋಜಿಸಿದ ಆಯೋಜಕರು ಮುಂದೆಯೂ ಇಂತಹ ಕ್ರೀಡೆಯನ್ನು ಬೆಳೆಸಿಕೊಂಡು ಹೋಗಲು ಶಕ್ತಿ ತುಂಬುವುವಂತಾಗಿ ಎಂದು ಅವರು ಹೇಳಿದರು.


ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈ ಸವಣೂರುರವರು ಮಾತನಾಡಿ ಕಂಬಳ ಕ್ರೀಡೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಮುಂದೆ ಬರಬೇಕು ಎಂದ ಅವರು ಕಂಬಳಕ್ಕಾಗಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದ ದಿ.ಜಯಂತ ರೈರವರನ್ನು ಸ್ಮರಿಸಿದ ಅವರು ಈ ಕ್ರೀಡೆಯ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದರು.


ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ| ಫಾ| ಡಾ| ಆಂಟನಿ ಪ್ರಕಾಶ್ ಮೊಂತೆರೋ ಮಾತನಾಡಿ ದೇಶ ಭಾಷೆ ಹಾಗೂ ಸಂಸ್ಕೃತಿ ನಮ್ಮನ್ನು ಒಗ್ಗೂಡಿಸಲು ಸಹಕಾರಿಯಾಗಿದೆ. ದೇಶ, ಭಾಷೆ ಹಾಗೂ ಸಂಸ್ಕೃತಿಯನ್ನು ಮೀರಿದಂತಹ ವಿಷಯ ಇದ್ದರೆ ಅದು ಮನುಷ್ಯತ್ವವಾಗಿದೆ ಎಂದು ಅವರು ಹೇಳಿದರು. ಸಂಸ್ಕೃತಿಯನ್ನು ಬಿಂಬಿಸುವ ಇಂತಹ ಕಾರ್ಯಕ್ರಮಗಳು ಎಲ್ಲರನ್ನು ಜಾತಿ ಮತದ ಎಲ್ಲೆಯನ್ನು ಮೀರಿ ಒಗ್ಗೂಡಿಸುವ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು. ನಾವೆಲ್ಲರೂ ಅತ್ಯುತ್ತಮ ಸಂಭ್ರಮಕ್ಕೆ ಈ ಕ್ರೀಡೆಯ ಮೂಲಕ ಒಂದುಗೂಡಿzವೆ ಎಂದು ಅವರು ಹೇಳಿದರು.

ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಂಬಳ ಸಮಿತಿಯ ಸಂಚಾಲಕ ಎಂ. ಸುಧಾಕರ್ ಶೆಟ್ಟಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ, ಪುತ್ತೂರು ಶ್ರೀಮಹಾಲಿಂಗೇಶ್ವರ ವಠಾರದ ಶ್ರೀಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅರುಣ್‌ಕುಮಾರ್ ಪುತ್ತಿಲ, ಸಂಪ್ಯ ಶ್ರೀವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಜಯಂತ ನಡುಬೈಲು, ವಾಮಂಜೂರು ಶಂಕು ಪೂಂಜ ದೇವೂ ಪೂಂಜ ಕಂಬಳ ಸಮಿತಿಯ ಅಧ್ಯಕ್ಷ ನವೀನ್ ಚಂದ್ರ ಆಳ್ವ, ಕ್ವಾಲಿಟಿ ಫಾರ್ಮ್ಸ್ ಆಂಡ್ ಫೀಡ್ ಮಾಲಕ ಗಂಗಾಧರ ಶೆಟ್ಟಿ ಮಠಂತಬೆಟ್ಟು, ಜೈನ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಪುತ್ತೂರು ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ, ಪುತ್ತೂರು ನಗರಸಭಾ ಪೌರಾಯುಕ್ತರಾದ ಮಧು, ಪುತ್ತೂರು ನಗರಸಭಾ ಉಪಾಧ್ಯಕ್ಷೆ ವಿದ್ಯಾ ಗೌರಿ, ಕೆಯ್ಯೂರು ಶ್ರೀಮಹಿಷಮರ್ದಿನಿ ದುರ್ಗಾ ಪರಮೇಶ್ವರಿ ದೇವಸ್ಥಾನ ಮಾಜಿ ಆಡಳಿತ ಮೊಕ್ತೇಸರ ಚೆನ್ನಪ್ಪ ರೈ ದೇರ್ಲ, ಪುತ್ತೂರು ಸಚಿನ್ ಟ್ರೇಡಿಂಗ್ ಕಂಪೆನಿಯ ಮಾಲಕ ಮಂಜುನಾಥ ನಾಯಕ್, ಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಸುರುಳಿ ಶ್ರೀಬಾಲಸುಬ್ರಹ್ಮಣ್ಯ ದೇವಸ್ಥಾನದ ಅನುವಂಶಿಕ ಮೊಕ್ತೇಸರ ರಾಮಮೋಹನ ರೈ, ಪರ್ಪುಂಜ ಬ್ರಹ್ಮ ಬೈದರ್ಕಳ ಗರಡಿಯ ಆಡಳಿತ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು, ಪಡುಮಲೆ ಗೆಜ್ಜೆಗಿರಿ ನಂದನ ಬಿತ್ತಿಲ್‌ನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಉಪ್ಪಿನಂಗಡಿ ಕಂಬಳ ಸಮಿತಿಯ ಉಮೇಶ್ ಶೆಣೈ, ತಾ. ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ನವೀನ್ ಭಂಡಾರಿ, ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಕರುಣಾಕರ ಸುವರ್ಣ, ಪುತ್ತೂರು ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಪ್ರಸನ್ನ ಹೆಬ್ಬಾರ್, ಗುಣಪಾಲ್ ಕಡಂಬು, ರವೀಂದ್ರ ರೈ ಬಳ್ಳಮಜಲು, ಸುಧೀರ್ ಶೆಟ್ಟಿ, ರಾಮದಾಸ್ ಗೌಡ ಮೊದಲಾದವರು ಅತಿಥಿಗಳಾಗಿ ಆಗಮಿಸಿದ್ದರು.

ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಸ್ವಾಗತಿಸಿ ಉಪಾಧ್ಯಕ್ಷ ಜೆ.ಕೆ ವಸಂತ ಕುಮಾರ್ ರೈ ವಂದಿಸಿದರು. ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ., ಖಜಾಂಜಿ ಪಂಜಿಗುಡ್ಡೆ ಈಶ್ವರ ಭಟ್, ಶಿವರಾಮ ಆಳ್ವ ಕುರಿಯ, ನೇಮಾಕ್ಷ ಸುವರ್ಣ, ಸಂತೋಷ್ ಕುಮಾರ್ ಜೆ.ಪಿ., ಸುದೇಶ್ ಕುಮಾರ್, ರೋಶನ್ ರೈ ಬನ್ನೂರು ಮೊದಲಾದವರು ವಿವಿಧ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ: ಸಹಾಕಾರಿ ರತ್ನ ಪ್ರಶಸ್ತಿ ವಿಜೇತರಾದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ ಸವಣೂರುರವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹಾಗೂ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಹಾಗೂ ಮತ್ತಿತ್ತರು ಸವಣೂರು ಸೀತರಾಮ ಶೆಟ್ಟಿಯವರನ್ನು ಶಾಲು ಹೊದಿಸಿ ಫಲ ಪುಷ್ಪ ನೀಡಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here