ನ.7ರಿಂದ12 : ಪಂಜ ಜೇಸಿಐ ಪಂಜ ಪಂಚಶ್ರೀ ರಜತ ರಶ್ಮಿ ಸಂಭ್ರಮ

0

 

 

ಜೇಸಿಐ ಪಂಜ ಪಂಚಶ್ರೀ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ರಜತ ರಶ್ಮಿ ಕಾರ್ಯಕ್ರಮವು ನ 7ರಿಂದ 12ರವರೆಗೆ ನಡೆಯಲಿದೆ. ನ.7 ರಂದು ಉದ್ಘಾಟನಾ ಕಾರ್ಯಕ್ರಮವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ವಲಯಾಧ್ಯಕ್ಷ ರೋಯನ್ ಉದಯ ಕ್ರಾಸ್ತ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ವಲಯ ಉಪಾಧ್ಯಕ್ಷ ರವಿಚಂದ್ರ ಪಾಟಾಳಿ ಉಪಸ್ಥಿತರಿರುವರು. ಬೆಳ್ಳಿತಾರೆ ನಕ್ಷತ್ರ ಲೋಕದಲ್ಲೊಂದು ಸುತ್ತು, ತಾರಾಲಯ 3ದಿನ ಪ್ರದರ್ಶನಗೊಳ್ಳಲಿದ್ದು,
ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆ ಸಂಚಾಲಕರಾದ ಡಾ. ಚಂದ್ರಶೇಖರ್ ದಾಮ್ಲೆ ತಾರಾಲಯ ಉದ್ಘಾಟನೆ ಮತ್ತು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಉಪಸ್ಥಿತರಿರುವರು.
ಝೂ ಪೆಟ್ ಶೋ-
ಅಪರೂಪದ ಸಾಕುಪ್ರಾಣಿ ಪಕ್ಷಿಗಳ ಪ್ರದರ್ಶನ 2ದಿನ ನಡೆಯಲಿದ್ದು. ಸುಳ್ಯ ಪಶು ಸಂಗೋಪನ ಇಲಾಖೆ ನಿರ್ದೇಶಕ ಡಾ. ನಿತಿನ್ ಪ್ರಭು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪಂಜ ವಲಯ ಅರಣ್ಯಾಧಿಕಾರಿ ಮಂಜುನಾಥ ಉಪಸ್ಥಿತರಿರುವರು.
ನ. 8ರಂದು ರಜತ ಟ್ರೋಪಿ 2022 ಆಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ 2ದಿನ ಪಂಜ ಜೂನಿಯರ್ ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಜೇಸಿ ಆಡಳಿತ ವಿಭಾಗ ನಿರ್ದೇಶಕ ಪುರುಷೋತ್ತಮ ಶೆಟ್ಟಿ ಉದ್ಘಾಟಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಂಜ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ವೆಂಕಪ್ಪ ಕೇನಾಜೆ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಚಿನ್ನ ಕಾಣಿಕೆ, ಸರಕಾರಿ ಪ್ರೌಢಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷ ಗಣೇಶ್ ಜೋಯಿಸ ಕಂರ್ಬಿ ಉಪಸ್ಥಿತರಿರುವರು.
ನ. 9ರಂದು ಬೆಳ್ಳಿ ಹಬ್ಬದ ಶಾಶ್ವತ ಯೋಜನೆ ಕದಿರು-
ನೂತನ ಗದ್ದೆ ದೇವಳಕ್ಕೆ ಸಮರ್ಪಣೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಸರಕಾರ ವಿಧಾನ ಪರಿಷತ್ತು ಮಾಜಿ ಸದಸ್ಯ ಅಣ್ಣಾ ವಿನಯ ಚಂದ್ರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲು ಗುತ್ತು, ಪೂರ್ವ ವಲಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ ಉಪಸ್ಥಿತರಿರುವರು. ಸರ್ವ ಋತು ತರಕಾರಿ ಬೆಳೆವಿಚಾರಗೋಷ್ಠಿಯಲ್ಲಿ
ಸಂಪನ್ಮೂಲ ವ್ಯಕ್ತಿಯಾಗಿ ಪ್ರಗತಿಪರ ಸರ್ವ ಋತು ಸಾವಯವ ತರಕಾರಿ ಬೆಳೆಗಾರರಾದ ಶಿವಪ್ರಸಾದ ವರ್ಮುಡಿ ಭಾಗವಹಿಸಲಿದ್ದಾರೆ.
ನಿಸರ್ಗದತ್ತ ಆಹಾರ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅರಂತೋಡು ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಸಸ್ಯ ಶಾಸ್ತ್ರಜ್ಞರು ಹಾಗೂ ವಿಶ್ರಾಂತ ಪ್ರಾಂಶುಪಾಲೆ ಶ್ರೀಮತಿ ರಮಾ ವೈ.ಕೆ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ನಿಸರ್ಗದತ್ತ ಆಹಾರ ತಯಾರಿ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನಕ್ಕೆ ಮುಕ್ತ ಅವಕಾಶವಿದೆ. ಸಂಜೆ ಕ್ರಿಕೆಟ್ ಪಂದ್ಯಾಟ ಸಮಾರೋಪ ಸಮಾರಂಭವು ಕೋಟಿ ಚೆನ್ನಯ ಕ್ರೀಡಾಂಗಣ ಸರಕಾರಿ ಪದವಿ ಪೂರ್ವ ಕಾಲೇಜು ಪಂಜದಲ್ಲಿ ನಡೆಯಲಿದೆ. ಬಹುಮಾನ ವಿತರಕರಾಗಿ ಸುಳ್ಯ ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯಕಾರಿ ನಿರ್ದೇಶಕ ಅಕ್ಷಯ್ ಕೆ ಸಿ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭರತ್ ಮುಂಡೋಡಿ,ರಾಷ್ಟ್ರೀಯ ಕ್ರೀಡಾ ತರಬೇತುದಾರ ಬಿ.ಕೆ ಮಾಧವ ಗೌಡ ಬೇರ್ಯ, ಜಿಲ್ಲಾ ಲಯನ್ಸ್ ನಿಕಟ ಪೂರ್ವ ಸಾರ್ವಜನಿಕ ಸಂಪರ್ಕ ಅಧಿಕಾರಿ ಜಯರಾಮ್ ದೇರಪ್ಪಜ್ಜನ ಮನೆ ಹಾಗೂ ಗುತ್ತಿಗಾರು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಮಾಧವ ಎರ್ದಡ್ಕ ಉಪಸ್ಥಿತರಿರುವರು.ನ. 10 ಸಂಜೆ ಗಂಟೆ 6 ರಿಂದ ಅಂತರಾಷ್ಟ್ರೀಯ ಖ್ಯಾತಿಯ ಮೆಗಾ ಮೆಜಿಷಿಯನ್ ಶ್ರೀ ಕುದ್ರೋಳಿ ಗಣೇಶ್ ಅವರಿಂದ ವಿಸ್ಮಯ ಜಾದೂ ಲೋಕದಲ್ಲೊಂದು ಪಯಣ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪಂಡಿತ್ ದೀನ ದಯಾಳ್ ಸಭಾಭವನದಲ್ಲಿ ನಡೆಯಲಿದೆ. ಸನ್ಮಾನ ಸಮಾರಂಭದಲ್ಲಿ ಹಿರಿಯ ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ ಸನ್ಮಾನ ಸ್ವೀಕರಿಸಲಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸೀತಾರಾಮ ರೈ ಸವಣೂರು ಸನ್ಮಾನಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ರಾಜ್ಯ ಜೇಸಿ ತರಬೇತುದಾರ ಎಂ.ಬಿ ಸದಾಶಿವ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯಕ್ರಮದಲ್ಲಿ ಹಾಲೆಮಜಲು ಆದರ್ಶ ಯೂತ್ ಕ್ಲಬ್ ಅಧ್ಯಕ್ಷ ದಿನೇಶ್ ಹಾಲೆಮಜಲು ಉಪಸ್ಥಿತರಿರುವರು.
ನ. 11.ರಂದು ರಜತ ಚಿತ್ತಾರ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ತಾರಾನಾಥ್ ಕೈರಂಗಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪೂರ್ವ ವಲಯ ಅಧಿಕಾರಿ ಪ್ರದೀಪ್ ಕುಮಾರ್ ರೈ ಪನ್ನೆ, ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಉಪಸ್ಥಿತರಿರುವರು.ಪೋಷಕರಿಗಾಗಿ ವಿಚಾರಗೋಷ್ಠಿ-ಸೃಜನಶೀಲ ಬದುಕಿನಲ್ಲಿ ಚಿತ್ರಕಲೆ ಎಂಬ ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೊಡಗು ಶಿಕ್ಷಣ ಚಿಂತಕ ಊ. ರಾ ನಾಗೇಶ್ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ ಬಹುಮಾನ ವಿತರಣಾ ಕಾರ್ಯಕ್ರಮವು ಜರುಗಲಿದೆ. ಬಹುಮಾನ ವಿತರಕರಾಗಿ ಬಂಟ್ವಾಳ ಎಸ್ ವಿ ಎಸ್ ಕಾಲೇಜು ನಿವೃತ್ತ ಪ್ರಾಧ್ಯಾಪಕರಾದ ಶ್ರೀಮತಿ ಲೀಲಾವತಿ ಬಾಲಕೃಷ್ಣ ನೇರಳ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜೇಸಿಐ ಪಂಜ ಪಂಚಶ್ರೀ ಸಂಸ್ಥಾಪಕ ಮಾರ್ಗದರ್ಶಕ ವಾಸುದೇವ ನಡ್ಕ, ಚಾರ್ವಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಉಪಸ್ಥಿತರಿರುವರು. ಸಂಜೆ ಗಂಟೆ 6ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ಜರುಗಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಸರಕಾರ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್ ಅಂಗಾರ ಉದ್ಘಾಟಿಸಲಿದ್ದಾರೆ. ರಜತ ರಥ ಸ್ಮರಣ ಸಂಚಿಕೆ ಮುಖಪುಟವನ್ನು ಮಂಗಳೂರು ಲೋಕಸಭಾ ಕ್ಷೇತ್ರ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅನಾವರಣ ಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ಬೆಂಗಳೂರು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್, ಹಿರಿಯ ಸಹಕಾರಿ ಧುರೀಣ ಜಾಕೆ ಮಾಧವ ಗೌಡ, ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಸುಳ್ಯ ಆಳ್ವಾಸ್ ನುಡಿಸಿರಿ ಘಟಕದ ಅಧ್ಯಕ್ಷ ಸುಧಾಕರ್ ರೈ, ಪಂಜ ಆಳ್ವಾಸ್ ನುಡಿಸಿರಿ ಘಟಕದ ಅಧ್ಯಕ್ಷ ಶಶಿಧರ ಪಳಂಗಾಯ ಉಪಸ್ಥಿತರಿರುವರು.
ನ. 12ರಂದು ಸಂಜೆ 6ರಿಂದ ಸಮಾರೋಪ ಸಮಾರಂಭವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ನಡೆಯಲಿದೆ. ಕರ್ನಾಟಕ ಸರಕಾರದ ವಿಶ್ರಾಂತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ‘ಭವ್ಯ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ’ ಎಂಬ ವಿಷಯದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಪೂರ್ವ ವಲಯಾಧ್ಯಕ್ಷ ರಾಜೇಂದ್ರ ಭಟ್ ‘ರಜತ ರಶ್ಮಿ ಸಾಧನೆಯ ಹಾದಿಯಲ್ಲಿ ಬೆಳ್ಳಿ ಬೆಳಕು’ ಎಂಬ ವಿಷಯದಲ್ಲಿ ಸಮಾರೋಪ ಭಾಷಣ ಮಾಡಲಿದ್ದಾರೆ. ಜೇಸಿಐ ಪಂಜ ಪಂಚಶ್ರೀ ಪೂರ್ವಾಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ಕಮಲ ಪತ್ರ ಪುರಸ್ಕಾರ ಪಡೆಯಲಿದ್ದಾರೆ. ವಲಯಾಧ್ಯಕ್ಷ ಜೇಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತ ಪುರಸ್ಕರಿಸಲಿರುವರು. ಜೇಸಿಐ ವಲಯ 15ರ ಪೂರ್ವ ವಲಯ ಅಧ್ಯಕ್ಷರುಗಳು ಉಪಸ್ಥಿತರಿರುವರು .
ಯುವ ತೇಜಸ್ಸು ಟ್ರಸ್ಟ್ ಪಂಜ, ಶಾರದಾಂಬ ಭಜನಾ ಮಂಡಳಿ ಪಂಜ, ಪಂಚಶ್ರಿ ಪಂಜ ಸ್ಪೋರ್ಟ್ಸ್ ಕ್ಲಬ್ ಗಳಿಗೆ ಪುರಸ್ಕಾರ ನಡೆಯಲಿದೆ.
ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಂಚಶ್ರೀ ವಿದ್ಯಾನಿಧಿ ವಿತರಣೆ ನಡೆಯಲಿದೆ. ಬಳಿಕ ಪ್ರತಿಷ್ಠಿತ ತಂಡಗಳ ಮುಕ್ತ ಡ್ಯಾನ್ಸ್ ಸ್ಪರ್ಧೆ ಸಿಲ್ವರ್ ಸ್ಟೆಪ್ಸ್ 2022 ನಡೆಯಲಿದೆ.

LEAVE A REPLY

Please enter your comment!
Please enter your name here