ರಾಮಕುಂಜ: ದಿ| ಎನ್.ದೇವಿ ಸ್ಮರಣಾರ್ಥ ಪುರುಷರ, ಮಹಿಳೆಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ‘ಜಿಲ್ಲಾ ಚಾಂಪಿಯನ್ ಶಿಪ್-2022’ ಉದ್ಘಾಟನೆ

0

ರಾಮಕುಂಜ: ದ.ಕ.ಜಿಲ್ಲಾ ವಾಲಿಬಾಲ್ ಸಂಸ್ಥೆ ಇದರ ಆಶ್ರಯದಲ್ಲಿ ಕಡಬ ತಾಲೂಕು ವಾಲಿಬಾಲ್ ಸಂಸ್ಥೆ ಸಹಯೋಗದಲ್ಲಿ ದಿ| ಎನ್.ದೇವಿಯವರ ಸ್ಮರಣಾರ್ಥ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ‘ಜಿಲ್ಲಾ ಚಾಂಪಿಯನ್ ಶಿಪ್-2022’ ಇದರ ಉದ್ಘಾಟನಾ ಸಮಾರಂಭ ಮಾ.೨೦ರಂದು ಅಪರಾಹ್ನ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಮೈದಾನದಲ್ಲಿ ನಡೆಯಿತು.

 


ಪುತ್ತೂರು ಸುದಾನ ವಿದ್ಯಾಸಂಸ್ಥೆಗಳ ಸಂಚಾಲಕ ರೆ|ಫಾ| ವಿಜಯ ಹಾರ್ವಿನ್‌ರವರು ಪಂದ್ಯಾಟ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯೋರ್ವರ ಸ್ಮರಣಾರ್ಥ ಅವರ ಹೆಸರಿನಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಸುತ್ತಿರುವುದು ಶ್ಲಾಘನೀಯವಾಗಿದೆ. ವಾಲಿಬಾಲ್ ಪಂದ್ಯಾಟ ಕೇವಲ ಪಟ್ಟಣಗಳಿಗೆ ಮಾತ್ರ ಸೀಮಿತವಾಗದೇ ಗ್ರಾಮೀಣ ಪ್ರದೇಶಗಳಿಗೂ ಪಸರಿಸಬೇಕು. ಇದಕ್ಕೆ ಸೂಕ್ತವಾದ ಆಟಗಾರರು ಗ್ರಾಮೀಣ ಭಾಗದಲ್ಲೂ ಇದ್ದಾರೆ. ಈ ನಿಟ್ಟಿನಲ್ಲಿ ದ.ಕ.ಜಿಲ್ಲಾ ವಾಲಿಬಾಲ್ ಸಂಸ್ಥೆ ಗ್ರಾಮೀಣ ಭಾಗವಾದ ರಾಮಕುಂಜದಲ್ಲಿ ಹೊನಲು ಬೆಳಕಿನ ಪಂದ್ಯಾಟ ಆಯೋಜಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ. ಇಂತಹ ಕ್ರೀಡೆಗಳಲ್ಲಿ ಯುವ ಜನತೆ ಹೆಚ್ಚಾಗಿ ಪಾಲ್ಗೊಳ್ಳಬೇಕೆಂದು ಹೇಳಿ ಪಂದ್ಯಾಟಕ್ಕೆ ಶುಭಹಾರೈಸಿದರು.

ಕಡಬ ತಾಲೂಕು ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಲಕ್ಮೀ ನಾರಾಯಣ ರಾವ್ ಆತೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ವಾಲಿಬಾಲ್ ಸಂಸ್ಥೆ ಅಡ್‌ಹಾಕ್ ಸಮಿತಿ ಬೆಂಗಳೂರು ಇದರ ಕಾರ್ಯದರ್ಶಿ ಶಶಿ ಶಿವಮೊಗ್ಗ, ಶಿವಮೊಗ್ಗ ಜಿಲ್ಲಾ ಫುಟ್‌ಬಾಲ್ ಎಸೋಸಿಯೇಶನ್ ಉಪಾಧ್ಯಕ್ಷ ಶ್ರೀನಾಥ್, ದ.ಕ.ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಬಿ.ಎಸ್.ಸತೀಶ್‌ಕುಮಾರ್, ಕಾರ್ಯದರ್ಶಿ ಶಂಕರ್ ಶೆಟ್ಟಿ ಪರಾರಿಗುತ್ತು, ಸಂಘಟನಾ ಕಾರ್ಯದರ್ಶಿ ಅಹಮ್ಮದ್ ಮುಸ್ತಫಾ, ಉಪಾಧ್ಯಕ್ಷೆ ಲಿಲ್ಲಿ ಪಾಸ್, ದಿ.ಎನ್.ದೇವಿಯವರ ಪುತ್ರ, ಬೆಂಗಳೂರಿನ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಗಣರಾಜ್ ಕುಂಬ್ಳೆ, ಕಡಬ ತಾಲೂಕು ವಾಲಿಬಾಲ್ ಸಂಸ್ಥೆ ಕಾರ್ಯದರ್ಶಿ ಮೋಹಿತ್ ಮತ್ತಿತರರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅಬ್ರಹಾಂರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here